ಸಚಿವ ಸಿ.ಟಿ.ರವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ
ಬೆಂಗಳೂರು, ಜ 9 ಚಿಕ್ಕಮಗಳೂರಿನ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸುವ ಜತೆಗೆ ಆಧಾರರಹಿತವಾಗಿ ಸಮ್ಮೇಳನಾಧ್ಯಕ್ಷ ಕಲ್ಕುಳಿ ವಿಠಲ್ ಹೆಗ್ಗಡೆ ಅವರನ್ನು ನಕ್ಸಲ್ ಎಂದು ನಿಂದಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಪ್ರಗತಿಪರ ಸಾಹಿತಿಗಳು ಚಿಂತನೆ ನಡೆಸಿದ್ದಾರೆ.
ಈ ಹಿಂದೆ ಎಂ.ಪಿ.ಪ್ರಕಾಶ್ ಅವರು ಗೃಹಸಚಿವರಾಗಿದ್ದಾಗ ನಕ್ಸಲ್ ಪಟ್ಟಿ ಬಿಡುಗಡೆಯಾಗಿತ್ತಾದರೂ ಸರಿಯಾದ ಮಾಹಿತಿ ಆಧಾರವಿಲ್ಲದೇ ಕೆಲಬುದ್ಧಿಜೀವಿಗಳ ಹೆಸರನ್ನು ಪಟ್ಟಿಯಲ್ಲಿ ಗೃಹ ಇಲಾಖೆ ಸೇರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪಟ್ಟಿ ಬಿಡುಗಡೆಯಾದ ಮರುದಿನವೇ ಅದನ್ನು ಸರ್ಕಾರ ಹಿಂಪಡೆದಿತ್ತು.
ಪಟ್ಟಿಯಲ್ಲಿ ಸಾಮಾಜಿಕ ಹೋರಾಟಗಾರ ಕಲ್ಕುಳಿ ವಿಠಲ್ ಹೆಗ್ಗಡೆ ಅವರ ಹೆಸರು ಇಲ್ಲದಿದ್ದರೂ ಇವರಿಗೆ ನಕ್ಸಲ್ ಎಂಬ ಹಣೆಪಟ್ಟವನ್ನು ಆಧಾರರಹಿತವಾಗಿ ಕಟ್ಟಿ ಅವರ ತೇಜೋವಧೆಗೆ ಕೆಲಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸಿದ್ದವು. ಅಲ್ಲದೇ ಅವರ ವಿರುದ್ಧ ವರದಿಗಳು ಸಹ ಪ್ರಕಟವಾಗಿದ್ದವು. ತಮ್ಮ ಮೇಲಿನ ಸುಳ್ಳು ಆರೋಪಗಳ ಹಿನ್ನೆಲೆಯಲ್ಲಿ ದೂರು ನೀಡಿ ಸುಮಾರು ಏಳು ವರ್ಷ ಪ್ರಕರಣ ನಡೆದು ವಿಠಲ್ ಹೆಗ್ಗಡೆ ಅವರ ತೇಜೋವಧೆ ಮಾಡಿದ್ದಕ್ಕಾಗಿ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡವನ್ನು ನ್ಯಾಯಾಲಯ ವಿಧಿಸಿತ್ತು.
ವಿಠಲ್ ಅವರ ಮೇಲೆ ನಕ್ಸಲ್ ಹೋರಾಟವಾಗಲೀ, ನಕ್ಸಲ್ ಬೆಂಬಲಿದ ಬಗ್ಗೆಯಾಗಲೀ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ಹೀಗಿದ್ದರೂ ಸಹ ಸಚಿವ ಸಿ.ಟಿ.ರವಿ ವಿಠಲ್ ಹೆಗ್ಗಡೆ ಅವರನ್ನು ನಕ್ಸಲ್ ಎಂದು ಟೀಕಿಸಿರುವುದು ಇದೀಗ ಸಾಹಿತ್ಯಾಸಕ್ತರ ಕಣ್ಣು ಕೆಂಪಗಾಗಿಸಿದೆ. ಹೀಗಾಗಿ ಸಿ.ಟಿ.ರವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಇನ್ನು ಸಮ್ಮೇಳನಕ್ಕೆ ಫ್ಲೆಕ್ಸ್ ಬ್ಯಾನರ್ ಕಟೌಟ್ ಹಾಕದಂತೆ ಸಂಭ್ರಮಾಚರಣೆ ಮಾಡದಂತೆ ಜಿಲ್ಲಾಡಳಿತ ಆದೇಶಿಸಿದೆ.
ರಂಗಕರ್ಮಿ ಪ್ರಸನ್ನ ಅವರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 