ಮುಂಬೈ - ದೆಹಲಿಯಿಂದ ಬೆಂಗಳೂರಿಗೆ ಬಂದ ಸಾವಿರಾರು ಪ್ರಯಾಣಿಕರು
ಬೆಂಗಳೂರು, ಜೂನ್ 2, ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಒಟ್ಟು 1,200 ಪ್ರಯಾಣಿಕರು ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮುಂಬೈ ರೈಲಿನಲ್ಲಿ ಬಂದವರಿಗೆ ಆರೋಗ್ಯ ತಪಾಸಣೆ ಮಾಡಿದ ಬಳಿಕ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು ಎಂದು ಸೂಚಿಸಲಾಗಿದೆ. ಗರ್ಭಿಣಿಯರು 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಮುಂಬೈನಿಂದ ಬಂದಿರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಸುಮಾರು 1,200 ಪ್ರಯಾಣಿಕರು ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು,ಅವರೆಲ್ಲರನ್ನೂ ಏಳು ದಿನದ ಸಾಂಸ್ಥಿಕ ಕ್ವಾರಂಟೈನ್ ಗೆ ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 