ರಾಷ್ಟ್ರೀಯ

ಮೂರು ದಿನ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೂರು  ದಿನ ಮಳೆ, ಕರಾವಳಿಯಲ್ಲಿ  ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಆಗಸ್ಟ್ 24:  ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ  ಮೂರು ದಿನಗಳ ಕಾಲ  ಮಳೆಯಾಗಲಿದೆ. ಆದರೆ  ಕರಾವಳಿಯಲ್ಲಿ  ಭಾರಿ ಮಳೆ ಯಾಗುವ ಸಾಧ್ಯತೆಯಿದ್ದು ಆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ .

ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಲಿದ್ದಾನೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು , ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದೂ  ಹವಾಮಾನ ಇಲಾಖೆ ಹೇಳಿದೆ.


ಸುದ್ದಿ ಓದಿ