ಮೂವರು ಶಿರಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಮುಂಡಗೋಡ 07: ತಾಲೂಕಿನ ಮೂವರು ಶಿಕ್ಷಕರು ಪ್ರಸಕ್ತ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3 ಶಾಲೆಯ ಮುಖ್ಯೋಪಾಧ್ಯಾಯಿನಿ ಮಾಲತಿ ಪಾಳೇದವರ, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಭದ್ರಾಪುರ ಸರಕಾರಿ ಕಿರಿಯ ಉರ್ದು ಶಾಲೆಯ ಶಿಕ್ಷಕ ನಾಗರಾಜ ನಾಯ್ಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿನೋದ ನಾಯಕ ಪ್ರಶಸ್ತಿ ಪಡೆದವರಾಗಿದ್ದು ಶಿರಸಿಯ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಮೂವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಇಒ ಜಕಣಾಚಾರಿ ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.