ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ರಿಂದ ಅ.31ರಿಂದ ಮೂರು ದಿನಗಳ ಜಿಲ್ಲಾ ಪ್ರವಾಸ
ವಿಜಯಪುರ 29: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಅ.31, ನ.1 ಮತ್ತು 2 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅ.31 ಶನಿವಾರ, ಬೆ.10ಗಂ. ನಿಡೋಣಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ರೂ.65 ಲಕ್ಷ ವೆಚ್ಚದಲ್ಲಿ ಆಯುಷ್ಮಾನ ಆರೋಗ್ಯ ಭವನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ.
ಬೆ.11ಗಂ. ಕಾಖಂಡಕಿ ಹರಳಯ್ಯನ ಗುಂಡದ ಹತ್ತಿರ ಲೋಕೋಪಯೋಗಿ ಇಲಾಖೆ ರೂ.80 ಲಕ್ಷ ವೆಚ್ಚದಲ್ಲಿ ಪ್ರಾನ್ಸಿ ಯೋಜನೆ ಅಡಿ ಹರಳಯ್ಯನ ಗುಂಡ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮ.12ಗಂ. ಶೇಗುಣಶಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆ ರೂ.12ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಭೂಮಿ ಪೂಜೆ ಸಲ್ಲಿಸಲಿದ್ದಾರೆ.
ಸಂ.6ಗಂ. ನಗರದ ಬಂಜಾರಾ ಕ್ರಾಸ್ ಹತ್ತಿರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಸಮುದಾಯ ಭವನದಲ್ಲಿ 22ನೇ ಶರಣತತ್ವ ಕಮ್ಮಟ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ.1 ರವಿವಾರ, ಬೆ.9ಗಂ. ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಗಂಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಬೆ.11.30ಗಂ. ಹೊನವಾಡ ಗ್ರಾಮದಲ್ಲಿ ಬೆಂಗಳೂರು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿ.ಎಸ್.ಆರ್. ಅನುದಾನದಲ್ಲಿ ಎಂ.ಪಿ.ಎಸ್. ಶಾಲಾ ಕಟ್ಟಡ ಭೂಮಿಪೂಜೆ ನೆರವೇರಿಸಲಿದ್ದಾರೆ. ಸಂ.6ಗಂ. ತಿಕೋಟಾ ಅಮ್ಮ ಫಂಕ್ಷನ ಹಾಲ್ ನಲ್ಲಿ ಎಂ.ಬಿ.ಪಿ ಉತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನ.2 ಸೋಮವಾರ ಬೆ. 10ಗಂ. ನಗರದ ಪೊಲೀಸ್ ಗ್ರೌಂಡ್ ನಲ್ಲಿ ಪೊಲೀಸ್ ಇಲಾಖೆ ಪ್ರಾಪರ್ಟಿ ರಿಟರ್ನ್ ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.