ಜಮಖಂಡಿಯಲ್ಲಿ ಮೂರು ದಿನಗಳ ಕಾನೂನು ಕಾರ್ಯಾಗಾರ: ಆ.7ರಿಂದ ಆರಂಭ

ಜಮಖಂಡಿಯಲ್ಲಿ ಮೂರು ದಿನಗಳ ಕಾನೂನು ಕಾರ್ಯಾಗಾರ: ಆ.7ರಿಂದ ಆರಂಭ  Three-day legal workshop in Jamkhandi: Starts on August 7

ಲೋಕದರ್ಶನ ವರದಿ

ಜಮಖಂಡಿ, ಆ.6: ರಾಜ್ಯ ವಕೀಲರ ಪರಿಷತ್ ಹಾಗೂ ಜಮಖಂಡಿ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್‌ 7ರಿಂದ 9ರವರೆಗೆ ಮೂರು ದಿನಗಳ ಕಾನೂನು ಕಾರ್ಯಾಗಾರವನ್ನು ನಗರದ ಎಸ್‌ಆರ್‌ಎ ಕ್ಲಬ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ.ಪಿ. ಕುಲಕರ್ಣಿ ತಿಳಿಸಿದ್ದಾರೆ.  

ನಗರದ ನ್ಯಾಯಾಲಯ ಸಭಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 7ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮ್ಮದ್ ಇಂತಿಯಾಜ್ ಅಹ್ಮದ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಪರಿಷತ್ ಸದಸ್ಯರಾದ ಐ.ಎಂ. ಪಾಟೀಲ, ಜಿ.ವಿ. ಕೋರಿಮಠ, ನಾರಾಯಣಸ್ವಾಮಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ವೈದ್ಯ ಶ್ರೀಕಾಂತ, ಹಿರಿಯ ನ್ಯಾಯಾಧೀಶ ಶ್ರೀಕಾಂತ ರವೀಂದ್ರ, ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ, ಹಿರಿಯ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.  

ಕುಲಕರ್ಣಿ ಮಾತನಾಡಿ, ಈ ಕಾರ್ಯಾಗಾರವು ಯುವ ವಕೀಲರು ಹಾಗೂ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.