ಅಂತರರಾಷ್ಟ್ರೀಯ

ಅಫ್ಘಾನಿಸ್ತಾನ ಬಾಂಬ್ ದಾಳಿಯಲ್ಲಿ ಮೂವರಿಗೆ ಗಾಯ

ಅಫ್ಘಾನಿಸ್ತಾನ ಬಾಂಬ್ ದಾಳಿಯಲ್ಲಿ ಮೂವರಿಗೆ ಗಾಯ

ಕಾಬೂಲ್: ಜೂನ್ 12 : ಅಫ್ಘಾನಿಸ್ತಾನದ ಕುಂದುಜ್ ನಗರದಲ್ಲಿ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ. ಸುದ್ದಿ ಸಂಸ್ಥೆ ಕ್ಸಿನ್ಹುವಾ ಈ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ ಮಾರುಕಟ್ಟೆ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದೆ. ಈ ವೇಳೆ ಮೂವರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಯುದ್ಧ ಪೀಡಿತ ದೇಶದಲ್ಲಿ ಇದು ಎರಡನೇ ಸ್ಫೋಟವಾಗಿದೆ. ಶನಿವಾರದಂದು ಕಾಬೂಲ್‌ನಲ್ಲಿ ಮಿನಿಬಸ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು. ಅಲ್ಲದೆ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಸುದ್ದಿ ಓದಿ