ಲಾರಿಗೆ ಡಿಕ್ಕಿಯಾಗಿ ನಿಂತಿದ್ದ ವ್ಯಾನ್ ಜಖಂ; ವಿಜಯನಗರಂನಲ್ಲಿ ಮೂವರು ಸಾವು, 9 ಮಂದಿಗೆ ಗಾಯ
Three killed, nine injured as lorry rams stationary van in Vizianagaram
ವಿಜಯನಗರಂ, ಜುಲೈ 28 : ವೇಗವಾಗಿ ಬಂದ ಲಾರಿಯೊಂದು ನಿಂತಿದ್ದ ವ್ಯಾನ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡ ಘಟನೆ ಮಂಗಳವಾರ ಬೆಳಗಿನ ಜಾವ ವಿಜಯನಗರಂ ಮಂಡಲದ ಚೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಮೂರು ಕುಟುಂಬಗಳಿಗೆ ಸೇರಿದ 16 ಮಂದಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಯಗಡಕ್ಕೆ ತೆರಳುತ್ತಿದ್ದರು. ಚೆಲ್ಲೂರು ಗ್ರಾಮದಲ್ಲಿ ವ್ಯಾನ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಮೃತರನ್ನು ಚಿಂತಪಲ್ಲಿ ರಾಂಬಾಬು (50), ಮಜ್ಜಿ ನಾರಾಯಣ ರಾವ್ (50) ಮತ್ತು ಬಿ. ಮೋಹನ್ ನಾಯ್ಡು (8) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 9 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಲಾಗಿದೆ.
ಅಪಘಾತದ ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಪುನಃಸ್ಥಾಪಿಸಿದರು. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 