ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದು ಮೂವರ ದುರ್ಮರಣ
ರಾಮಗಂಗಾ ನದಿಯ ಮೇಲಿನ ನಿರ್ಮಾಣ ಹಂತದ ಸೇತುವೆ
ಲಕ್ನೋ 25: ಗೂಗಲ್ ನಕ್ಷೆಗಳನ್ನು ಅವಲಂಬಿಸಿ ಕಾರು ಚಲಾಯಿಸಿ ನಿರ್ಮಾಣ ಹಂತದ ಸೇತುವೆ ಮೇಲೆ ಸಾಗಿ, ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ನಿರ್ಮಾಣ ಹಂತದ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು.
ಸಂತ್ರಸ್ತರನ್ನು ವಿವೇಕ್ ಮತ್ತು ಅಮಿತ್ ಎಂದು ಗುರುತಿಸಲಾಗಿದ್ದು,ಮೂರನೇ ವ್ಯಕ್ತಿಯ ಗುರುತಿನ ಕುರಿತು ಹೆಚ್ಚಿನ ವಿವರಗಳನ್ನು ಹುಡುಕಲಾಗುತ್ತಿದೆ, ಗುರುಗ್ರಾಮದಿಂದ ತಮ್ಮ ಪ್ರಯಾಣವನ್ನು ಆರಂಭಿಸಿ ಮದುವೆಯಲ್ಲಿ ಪಾಲ್ಗೊಳ್ಳಲು ಬರೇಲಿಗೆ ತೆರಳುತ್ತಿದ್ದಾಗ ಶನಿವಾರ ಈ ಘಟನೆ ನಡೆದಿದೆ.
ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ರಾಮಗಂಗಾ ನದಿಗೆ 50 ಅಡಿ ಎತ್ತರದಿಂದ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಮರುದಿನ ಬೆಳಿಗ್ಗೆ ಸ್ಥಳೀಯರು ಹಾನಿಗೊಳಗಾದ ಕಾರನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಿರ್ಮಾಣ ಹಂತದ ಸೇತುವೆ ಮೇಲೆ ಬ್ಯಾರಿಕೇಟ್ ಹಾಕದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 