ಗಾಜಾದಿಂದ ಮೂರು ರಾಕೆಟ್ ಉಡಾವಣೆ
ಜೆರುಸಲೆಮ್, ಜನವರಿ 31,ದಕ್ಷಿಣ ಇಸ್ರೇಲ್‌ನ ಗಾಜಾ ಪಟ್ಟಿಯಿಂದ ಗುರುವಾರ ರಾತ್ರಿ ಮೂರು ರಾಕೆಟ್‌ಗಳನ್ನು ಹಾರಿಸಲಾಗಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.ರಾಕೆಟ್ ವಿರೋಧಿ ಐರನ್ ಡೋಮ್ ವ್ಯವಸ್ಥೆಯ ಮೂಲಕ ಎರಡು ರಾಕೆಟ್‌ಗಳನ್ನು ನಿರ್ಬಂದಿಸಲಾಗಿದೆ ಎಂದೂ ಮಿಲಿಟರಿ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೂರನೇ ರಾಕೆಟ್ ಸ್ಡೆರೋಟ್ ಪಟ್ಟಣದ ಸಪಿರ್ ಅಕಾಡೆಮಿಕ್ ಕಾಲೇಜು ಮೈದಾನಕ್ಕೆ ಅಪ್ಪಳಿಸಿ ಬೆಂಕಿ ಘಟನೆಗೆ ಕಾರಣವಾಗಿದೆ ಎಂದೂ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ಯಾವುದೇ ಗುಂಪು ತಕ್ಷಣ ರಾಕೆಟ್ ಉಡಾವಣೆ ಜವಾಬ್ದಾರಿ ಹೊತ್ತುಕೊಂಡಿಲ್ಲ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಘೋಷಿಸಿದ ಶಾಂತಿ ಯೋಜನೆಯೇ ಈ ಪ್ರದೇಶದಲ್ಲಿನ ಉದ್ವಿಗ್ನತೆಗೆ ಕಾರಣವಾಗಿದೆ. ಇದು ಇಸ್ರೇಲ್ ಪರವಾಗಿದೆ, ಮೇಲಾಗಿ ಪಕ್ಷಪಾತದಿಂದ ಕೂಡಿದೆ ಎಂದೂ ಪ್ಯಾಲೆಸ್ಟೀನ್ ಪ್ರಬಲವಾಗಿ ಆರೋಪಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 