ಅಂತರರಾಷ್ಟ್ರೀಯ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ: ಮೂವರು ಸೈನಿಕರು ಸಾವು, ನಾಲ್ವರಿಗೆ ಗಾಯ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ: ಮೂವರು ಸೈನಿಕರು ಸಾವು, ನಾಲ್ವರಿಗೆ ಗಾಯ

ಇಸ್ಲಾಮಾಬಾದ್, ಆಗಸ್ಟ್ 31: ಪಾಕಿಸ್ತಾನದ ದಕ್ಷಿಣ ವಾಜಿರಿಸ್ತಾನದ ವಾಯುವ್ಯ ಬುಡಕಟ್ಟು ಜಿಲ್ಲೆಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಸೇನಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ದಕ್ಷಿಣ ವಾಜಿರಿಸ್ತಾನ್‌ನಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ವಾಜಿರಿಸ್ತಾನ್‌ನಲ್ಲಿ ನಡೆದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇತರ ನಾಲ್ವರು ಸೈನಿಕರು ಸಹ ಗಾಯಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕೆಲ ಭಯೋತ್ಪಾದಕರು ಅಡಗಿರುವ ಸುಳಿವು ದೊರೆತ ನಂತರ ಪಾಕಿಸ್ತಾನ ಸೇನಾ ಸಿಬ್ಬಂದಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದವು ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.

ದಾಳಿಯ ನಂತರ ಸಶಸ್ತ್ರ ಪಡೆಗಳ ಹತ್ತಾರು ತುಕಡಿಗಳು ಈ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿವೆ.  


ಸುದ್ದಿ ಓದಿ