ಹೂವಿನ ಹಡಗಲಿ

ಕಬಡ್ಡಿ ಪಂದ್ಯಾವಳಿಯಲ್ಲಿ ತಿಮಲಾಪುರ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

ಕಬಡ್ಡಿ ಪಂದ್ಯಾವಳಿಯಲ್ಲಿ ತಿಮಲಾಪುರ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

ಹೂವಿನ ಹಡಗಲಿ 27:ಪ್ರಾಥಮಿಕ ಶಾಲಾ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ತಾಲೂಕಿನ ತಿಮಲಾಪುರ 63 (ಅಲ್ಲಿಪುರ)ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಶುಕ್ರವಾರ ಹೊಸಪೇಟೆಯ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಫೈನಲ್  ಕಬ್ಬಡಿ ಪಂದ್ಯಾವಳಿಯಲ್ಲಿ ತಿಮಲಾಪುರ 63 ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಕೂಡ್ಲಿಗಿ ತಾಲೂಕಿನ ವಿರುದ್ಧ ಮೇಲೆ ಫೈನಲ್ ಪಂದ್ಯದಲ್ಲಿ ರೋಚಕ ಆಟವಾಡಿ ವಿಜಯಶಾಲಿಯಾಗಿದ್ದಾರ. 

ಅಭಿನಂದನೆ: ವಿಭಾಗ ಮಟ್ಟಕ್ಕೆ ಆಯ್ಕೆಯಾದ ಬಾಲಕರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್, ಶಾಲೆಯ ಮುಖ್ಯ ಗುರುಗಳು ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು ಪದಾಧಿಕಾರಿಗಳು, ಊರಿನ ಗಣ್ಯರು ಅಭಿನಂದಿಸಿದ್ದಾರೆ. 


ಸುದ್ದಿ ಓದಿ