ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ: ಶಾಸಕ ವಿಶ್ವಾಸ ವೈದ್ಯ

ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ: ಶಾಸಕ ವಿಶ್ವಾಸ ವೈದ್ಯ  Timely loan facilities for farmers: MLA Vishwas Vaidya

ಲೋಕದರ್ಶನ ವರದಿ 

ಯರಗಟ್ಟಿ 02 : ಕೃಷಿ ಚಟುವಟಿಕೆಗಳಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸುವುದು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ. ಸಹಕಾರಿ ಸಂಘಗಳು ನೀಡುವ ಸಾಲದ ನೆರವಿನಿಂದ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಶಾಸಕ ವಿಶ್ವಾಸ ವೈದ್ಯ ಹೇಳಿದರು.   

ತಾಲೂಕಿನ ಸೊಪ್ಪಡ್ಲ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಫಲಾನುಭವಿಗಳಿಗೆ ಒಟ್ಟು 2.30 ಕೋಟಿ ಸಾಲದ ಚೆಕ್ಗಳನ್ನು ವಿತರಿಸಿ ಅವರು ಮಾತನಾಡಿದರು.  

ಜಮೀನಿನ ಸೂಕ್ತ ದಾಖಲೆಗಳನ್ನು ಒದಗಿಸಿದ 525 ರೈತರಿಗೆ ಶೇ.0 ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ರೈತರ ಪರವಾಗಿ ಸರ್ಕಾರ ಸದಾ ಇರಲಿದೆ. ರೈತರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕು ಎಂದರು.  

ಬಿಡಿಸಿಸಿ ಬ್ಯಾಂಕ್ ಡಿಜಿಎಂ ಎಸ್‌.ಬಿ. ಬಾಗೇವಾಡಿ ಮಾತನಾಡಿ, 2.70 ಕೋಟಿ ಇದ್ದ ಸಾಲದ ಮೊತ್ತವನ್ನು 5 ಕೋಟಿಗೆ ಹೆಚ್ಚಿಸಲಾಗಿದೆ. ಬ್ಯಾಂಕ್ನಲ್ಲಿ 10 ಸಾವಿರ ಕೋಟಿ ಠೇವಣಿ ಇದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 4 ಸಾವಿರ ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ. ಟ್ರ್ಯಕ್ಟರ್, ಹನಿ ನೀರಾವರಿ ಹಾಗೂ ಉದ್ಯಮ ಸಾಲ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಶೇ.12 ಬಡ್ಡಿದರದಲ್ಲಿ ಪ್ರತಿ ಎಕರೆಗೆ 1 ಲಕ್ಷ ಸಾಲ ನೀಡಲಾಗುವುದು ಎಂದರು.  

ಕಾರ್ಯಕ್ರಮದಲ್ಲಿ ಗುರುಲಿಂಗಯ್ಯ ಹಿರೇಮಠ, ಪಿಕೆಪಿಎಸ್ ಅಧ್ಯಕ್ಷ ಪ್ರಜ್ವಲ ಬಿರಾದಾರಗೌಡ, ಬಿಡಿಸಿಸಿ ಬ್ಯಾಂಕ್ ತಾಲೂಕು ನಿಯಂತ್ರಣಾಧಿಕಾರಿ ಎಸ್‌.ಆರ್‌. ಮಾದರ, ನೀರೀಕ್ಷಕ ಡಿ.ಎಸ್‌. ಅಗಸಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.