ತಾಳಿಕೋಟಿ

ನ. 23ರಂದು ಟಿಪ್ಪು ಸುಲ್ತಾನ್ ಜಯಂತಿ ಉತ್ಸವ

ನ. 23ರಂದು ಟಿಪ್ಪು ಸುಲ್ತಾನ್ ಜಯಂತಿ ಉತ್ಸವ


           ತಾಳಿಕೋಟಿ 20: ಐತಿಹಾಸಿಕ ಪರಂಪರೆ ಹಾಗೂ ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರುವ ಉದ್ದೇಶದಿಂದ ಪಟ್ಟಣದಲ್ಲಿ ನವೆಂಬರ್ 23ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಮುಸ್ಲಿಂ ಧರ್ಮಗುರು ಜನಾಬ್ ಸೈಯದ್ ಶಕೀಲ್ ಅಹ್ಮದ್ ಖಾಜಿ ತಿಳಿಸಿದರು.  

            ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಜರತ್ ಟಿಪ್ಪು ಸುಲ್ತಾನ್ ರಕ್ಷಣಾ ಸಮಿತಿ ವತಿಯಿಂದ 23 ಸೋಮವಾರ ಸಂಜೆ 6 ಘಂಟೆಗೆ ಸಾಂಭಪ್ರಭು ಶರಣಮುತ್ಯಾ ದೇವಸ್ಥಾನದ ಆವರಣದಲ್ಲಿ ಭವ್ಯ ಉದ್ಘಾಟನಾ ಸಮಾರಂಭ ಜರುಗಲಿದೆ.

         ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಮತ್ತು ಹುನಗುಂದ ಶಾಸಕ, ಸಚಿವ ವಿಜಯಾನಂದ ಕಾಶಪ್ಪನವರ ಅವರು ಉತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.  

            ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹಾಗೂ ಸಾಂಭಪ್ರಭು ಶರಣರ ಮಠದ ಪೂಜ್ಯ ಶ್ರೀ ಶರಣಪ್ಪನವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಮುದ್ದೇಬಿಹಾಳ ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್‌. ನಾಡಗೌಡ (ಅಪ್ಪಾಜಿ) ವಹಿಸಲಿದ್ದಾರೆ.  

           ದೇವರ ಹಿಪ್ಪರಗಿ ಶಾಸಕ ರಾಜುಗೌಡ (ಭೀಮನಗೌಡ) ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ವಿಜಯಪುರದ ಸೈಯದ್ ಫೈಸಲ್ ಸಖಾಪ್ ಖಾದ್ರಿ ಸಾದತ್, ಅಬ್ದುಲ್ ಹಮೀದ್ ಮುಶ್ರೀಫ ಹಾಗೂ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಜ್ಮಾ ನಜೀರ್ ಚಿಕ್ಕನೇರಳೆ ಸೇರಿದಂತೆ ಹಲವು ಗಣ್ಯರು ಘನ ಉಪಸ್ಥಿತಿ ವಹಿಸಲಿದ್ದಾರೆ.  


ಸುದ್ದಿ ಓದಿ