ಬಸ್ಸಿಗಾಗಿ ಕಾದು ಕಾದು ಸುಸ್ತಾದ ಮಹಿಳೆಯರು
ಯರಗಟ್ಟಿ: 19: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನಾರಿ ಶಕ್ತಿ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಸಂತಸವನ್ನುಂಟು ಮಾಡಿದರೆ ಇನ್ನೊಂದು ಕಡೆ ತೀವ್ರ ನಿರಾಸೆಯಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ನಗರ, ಪಟ್ಟಣಗಳಿಗೆ ಹೋಗಬೇಕಾದರೆ ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದರಿಂದ ಖಾಸಗಿ ವಾಹನದಲ್ಲಿ ಪ್ರಯಾಣ ಬೆಳೆಸುತ್ತಿದ್ದರು. ಆದರೆ, ಇವಾಗ ಮಹಿಳೆಯರು ನಾರಿ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣಿಕ್ಕಾಗಿ ಬಂದು ಬಸ್ಸಿಗಾಗಿ ಕಾಯುತ್ತಿರುವುದು ಸಮೀಪದ ಸಾಲಹಳ್ಳಿ ಗ್ರಾಮದಲ್ಲಿ ಕಂಡುಬರುತ್ತಿದೆ. ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಗೊಡಚಿ ವೀರಭದ್ರೇಶ್ವರ ದೇವಾಲಯ, ಕಟಕೋಳ ಸಿದ್ರಾಯಜ್ಜನವರ ಮಠಕ್ಕೆ ತೆರಳಲು ಬಸ್ಸಿಗಾಗಿ ಮಹಿಳೆಯರು ಬಿಸಿಲನ್ನು ಲೆಕ್ಕಿಸದೆ ಮಕ್ಕಳೊಂದಿಗೆ ಕಾಯುತ್ತಿದ್ದರು.