ಇರಕಲ್ಗಡಾದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮ
Tobacco Free Youth Campaign 3.0 program in Irakalgada
ಇರಕಲ್ಗಡಾದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮ
ಕೊಪ್ಪಳ 24 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇರಕಲ್ಲಗಡರವರ ಸಂಯುಕ್ತಾಶ್ರಯದಲ್ಲಿ ಇರಕಲ್ಕಡಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು (ಅ.23) ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ 3.0 (ವಿಶೇಷ ಅಭಿಯಾನ 60 ದಿನಗಳು) ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಐಇಸಿ ಪ್ರಚಾರ ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ-2003ರ ಬಗ್ಗೆ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಂಗಪ್ಪ ಮಮಟಗೇರಿ, ಜಿಲ್ಲಾ ಸಲಹೆಗಾರರಾದ ಸರಸ್ವತಿ, ಸಮಾಜ ಕಾರ್ಯಕರ್ತರಾದ ಡಾ.ಲಕ್ಷ್ಮಿ ಕೆ, ಶೈಲಜಾ ಎಲ್.ಎಚ್.ವಿ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 