ತಂಬಾಕು ನಿಯಮ ಉಲ್ಲಂಘನೆ: 1,100 ದಂಡ ವಸೂಲಿ
Tobacco rule violation: 1,100 fine collected
ಮುಂಡಗೋಡ 12 : ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಾಗೂ ಜಿಲ್ಲಾ ಆಡಳಿತದ ನಿರ್ದೇಶನದಂತೆ ಮುಂಡಗೋಡ ಪಟ್ಟಣ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮತ್ತು ಬಳಕೆ ಕುರಿತ ವಿಶೇಷ ದಾಳಿ ನಡೆಸಿ, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.
ತಹಶೀಲ್ದಾರ್ ಎಸ್.ಎ. ಪ್ರಸಾದ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಹಿ2003 ಕುರಿತು ಜಾಗೃತಿ ಮೂಡಿಸಲಾಯಿತು. ನಿಯಮ ಉಲ್ಲಂಘನೆ ಕಂಡುಬಂದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ದಾಳಿ ವೇಳೆ ಕಾಯ್ದೆಯ ಸೆಕ್ಷನ್ 4 ಹಾಗೂ ಸೆಕ್ಷನ್ 6(ಎ) ಅಡಿಯಲ್ಲಿ ನಾಲ್ಕು ಪ್ರಕರಣಗಳನ್ನು ದಾಖಲಿಸಿ, ಒಟ್ಟು ರೂ 1,100 ದಂಡ ವಸೂಲಿ ಮಾಡಲಾಗಿದೆ. ವಸೂಲಾದ ಮೊತ್ತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಖಾತೆಗೆ ಜಮಾ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಡಿಪಿಒ ಸಂಜೀವ ಕುಮಾರ ಸದಲಗಿ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಅಧಿಕಾರಿಗಳು ಮನವಿ ಮಾಡಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 