ಇಂಡಿ

ಇಂದು ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆ ತನ್ನದೆ ಆದ ಛಾಪು ಮೂಡಿಸಿದ್ದಾಳೆ: ಬಂಡೆ

ಇಂದು ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆ ತನ್ನದೆ ಆದ ಛಾಪು ಮೂಡಿಸಿದ್ದಾಳೆ: ಬಂಡೆ


ಇಂಡಿ 08: ಇಂದು ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ ಮಹಿಳೆ ಶ್ರೇಷ್ಠ ಸ್ಥಾನದಲ್ಲಿ ಹೊಂದಿದ್ದಾಳೆ ಎಂದು ಇಂಗ್ಲೀಷ ಶಿಕ್ಷಕ ಸಂತೋಷ ಬಂಡೆ ಹೇಳಿದರು.       

 ತಾಲೂಕಿನ ಹಿರೇರೂಗಿಯ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.       

  ಸುಸ್ಥಿರ ಅಭಿವೃದ್ಧಿ, ಶಾಂತಿ, ಸುರಕ್ಷತೆಯನ್ನು ಸಾಧಿಸಲು ಮಹಿಳೆಯರ ಸಹಭಾಗಿತ್ವವನ್ನು ಪುರುಷ ಸಮಾನವಾಗಿ ಪ್ರೇರೇಪಿಸಲು ಹಲವು ವರ್ಷಗಳಿಂದ ವಿಶ್ವಸಂಸ್ಥೆ ಹಾಗೂ ಅದರ ಅಂಗ ಸಂಸ್ಥೆಗಳು ಮಹಿಳಾ ದಿನಾಚರಣೆಯನ್ನು ಉತ್ತೇಜಿಸುತ್ತಿರುವದು ಶ್ಲಾಘನೀಯ ಎಂದರು.         

   ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ,ಸಮಾಜದಲ್ಲಿ ಮಹಿಳಾ ಹಕ್ಕುಗಳು ಮತ್ತು ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.       

  ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಶಿಕ್ಷಕಿ ಎಸ್ ಎಚ್ ಮೈದರಗಿ, ಮಹಿಳಾ ದಿನವನ್ನು ನಮ್ಮ ಜೀವನದಲ್ಲಿ ಮತ್ತು ಪ್ರಪಂಚದಾದ್ಯಂತ ಮಹಿಳೆಯರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಎಲ್ಲರೂ ಅಂಗೀಕರಿಸುವ ದಿನವೆಂದು ಪರಿಗಣಿಸಬೇಕು ಎಂದು ಹೇಳಿದರು. ಎಸ್ ಬಿ ಹೆಬ್ಬಾಳ, ಎಸ್ ಪಿ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 


ಸುದ್ದಿ ಓದಿ