ಕೊಪ್ಪಳ

ಇಂದು ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

ಇಂದು ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ
Today: Swearing-in of new office-bearers of the Banajiga community and a talent recognition ceremony

ಕೊಪ್ಪಳ  24: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ.) ಬೆಂಗಳೂರು ತಾಲೂಕ ಘಟಕ ಕೊಪ್ಪಳ ವತಿಯಿಂದ ತಾಲೂಕು ಬಣಜಿಗ ಸಮಾಜದ  ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು  ದಿ, 25 ರ ರವಿವಾರ ದಂದು  ಜರುಗಲಿದೆ ಎಂದು ಸಂಘದ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಅಂಗಡಿ ತಿಳಿಸಿದ್ದಾರೆ, ಅವರು ನಗರದಲ್ಲಿರುವ ಪತ್ರಿಕಾ ಭವನದಲ್ಲಿ ಶನಿವಾರದಂದು ಏರಿ​‍್ಡಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರಣೆ ನೀಡಿದ ಅವರು ನಗರದ ಹೊಸಪೇಟೆ ರಸ್ತೆಯಲ್ಲಿರುವ   ಶಿವ ಶಾಂತವೀರ ಮಂಗಲ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಸಂಘದ ನೂತನ ಪದಾಧಿಕಾರಿಗಳ ಪದ ಗ್ರಹಣ  ಸಂದರ್ಭದಲ್ಲಿ   ಎಸ್‌.ಎಸ್‌.ಎಲ್‌.ಸಿ. ಹಾಗೂ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು ಮುಂದುವರೆದು ಮಾತನಾಡಿಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜದ ಮುಖಂಡ ಚಿಕ್ಕೋಡಿಯ ಮಾಜಿ ಸಂಸದ ರಮೇಶ ಕತ್ತಿ ಅವರು ನೆರವೇರಿಸಲಿದ್ದಾರೆ.  

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ರೊಡಗಿ ಧ್ವಜಾರೋಹಣ ನೆರವೇರಿಸಲಿದ್ದು, ಕೊಪ್ಪಳ ತಾಲೂಕಾ ಅಧ್ಯಕ್ಷರಾದ ವೀರಣ್ಣ ಬುಳ್ಳಾ ಅಧ್ಯಕ್ಷತೆ ವಹಿಸಲಿದ್ದಾರೆ. ಗದಗಿನ ನಿವೃತ್ತ ಉಪನ್ಯಾಸಕರಾದ ಸಿದ್ದು ಯಾಪಲ ಪರವಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿದರಿ, ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಪಗದದಿನ್ನಿ ಭಾಗವಹಿಸಲಿದ್ದಾರೆ. .ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕು ಹಾಗೂ ನಗರ ಘಟಕಗಳ (ಪುರುಷ ಮತ್ತು ಮಹಿಳಾ ಘಟಕಗಳು ಸೇರಿದಂತೆ) ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆ. ಸಮಾಜದ ಬಾಂಧವರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರ ಪರವಾಗಿ ಮಂಜುನಾಥ್ ಅಂಗಡಿ ರವರು ಪತ್ರಿಕಾಗೋಷ್ಠಿಯಲ್ಲಿ  ಮನವಿ ಮಾಡಿಕೊಂಡರು, ಈ ಸಂದರ್ಭದಲ್ಲಿ ಅವರೊಂದಿಗೆ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಪರಿಮಳ ವಿ ಹತ್ತಿ, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ವಾಲಿ, ತಾಲೂಕ ಘಟಕದ ಅಧ್ಯಕ್ಷ ಶಾಂತೇಶ ಸಂಕ್ಲಾಪುರ ಸೇರಿದಂತೆ ಅನೇಕರು ಉಪಸಿತರಿದ್ದರು. 


ಸುದ್ದಿ ಓದಿ