ಇಂದು ವಿಶ್ವ ಪರಿಸರ ದಿನ:ವಿವಿಧ ಕಾರ್ಯಕ್ರಮಗಳು
Today is World Environment Day: Various programs
ಲೋಕದರ್ಶನ ವರದಿ
ತಾಳಿಕೋಟಿ 04: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಘಟಕದ ವತಿಯಿಂದ ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಲು ಅಭಿಯಾನವನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಇಂದು(ಜೂನ್.5) ಜಮಾತೆ ಇಸ್ಲಾಮಿ ಹಿಂದ್ ಸ್ಥಳೀಯ ಶಾಖೆ ಹಾಗೂ ಹಸಿರು ಸಂಪದ ಬಳಗದ ಸಹಯೋಗದಲ್ಲಿ ಹಲವು ಕಾರ್ಯಕ್ರಮಗಳು ಜರುಗಲಿವೆ. ಮುಂಜಾನೆ 8-00 ಘಂಟೆಗೆ ಪಟ್ಟಣದ ಹುಣಸಗಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಸಿ ನೆಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಇಂದು ಶುಕ್ರವಾರ ಆಗಿರುವುದರಿಂದ ಪಟ್ಟಣದ ಪ್ರಮುಖ ಮಸೀದಿಗಳಲ್ಲಿ ಪರಿಸರ ಪ್ರಜ್ಞೆ ಹಾಗೂ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡಲಾಗುವುದು. ಮಧ್ಯಾಹ್ನ 2-00 ಘಂಟೆಗೆ ಪಟ್ಟಣದ ಕತ್ರಿ ಬಜಾರ್ ಹತ್ತಿರ ಇರುವ ಜಾಮಿಯಾ ಮಸೀದಿಯಿಂದ ತಹಸಿಲ್ದಾರ ಕಾರ್ಯಾಲಯದ ಮೈದಾನದವರೆಗೆ ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆಯನ್ನು ಜಾಗೃತಿಗೊಳಿಸಲು "ಪರಿಸರ ಜಾಗೃತಿ ಜಾಥಾ" ನಡೆಯುವುದು ಇದರಲ್ಲಿ ನೂರಾರು ಜನ ಪರಿಸರ ಪ್ರೇಮಿಗಳು ಸ್ವಯಂ ಪ್ರೇರಣೆಯಿಂದ ಭಾಗವಹಿಸುವರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 