ಬೆಳಗಾವಿ ಪ್ರವೇಶಕ್ಕೆ ನಾರಾಯಣ ಗೌಡರಿಗೆ ನಿರ್ಬಂಧ, ಸಿಡಿದೆದ್ದ ಕರವೇ : ಮಹಾರಾಷ್ಟ್ರದ ವಾಹನಗಳ ಮೇಲೆ ಮಸಿ, ಕಲ್ಲು : ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಕರವೇ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆದು ಬಂಧಿಸಿದ ಬೆಳಗಾವಿ ಪೊಲೀಸರು
ಬೆಳಗಾವಿ, ಡಿ, 6 : ಮಹಾರಾಷ್ಟ್ರ ಸಚಿವರ ಬೆಳಗಾವಿ ಆಗಮನವನ್ನು ವಿರೋಧಿಸಿ ಹಾಗೂ ರಾಜ್ಯ ಸಾರಿಗೆ ಬಸ್‍ಗಳಿಗೆ ಮಸಿ ಬಳಿದಿರುವ ಮಹಾ ಪುಂಡರ ವಿರುದ್ದ ಮಂಗಳವಾರ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ನೂರಾರು ವಾಹನಗಳೊಂದಿಗೆ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಸಾವಿರಾರು ಕರವೇ ಕಾರ್ಯಕರ್ತರನ್ನು ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿ ತಡೆದ ಹಿನ್ನಲೆಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ವಾಹನಗಳ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತ ಪಡಿಸಿದರು. ಇದರಿಂದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಗಡಿ ವಿಚಾರದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ಪಾಠ ಕಲಿಸಲು ನಗರದ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಕನ್ನಡದ ಧ್ವಜವನ್ನು ಹಾರಾಡಿಸಬೇಕೇನ್ನುವ ಉದ್ದೇಶದಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಕರವೇ ಕಾರ್ಯಕರ್ತರನ್ನು ಹಿರೇಬಾಗೇವಾಡಿಯಲ್ಲಿ ಪೆÇಲೀಸರು ತಡೆದರು. ಈ ಸಂದರ್ಭದಲ್ಲಿ ಪೆÇಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪುಣೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಹಾರಾಷ್ಟ್ರ ನೋಂದಣ ವಾಹನದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಹಲವು ಲಾರಿಗಳ ಗಾಜುಗಳು ಪುಡಿಪುಡಿಯಾದವು. ಜೊತೆಗೆ ಮಹಾರಾಷ್ಟ್ರ ನೋಂದಣ ಇರುವ 10ಕ್ಕೂ ಹೆಚ್ಚು ವಾಹನಗಳಿಗೆ ಕಪ್ಪುಮಸಿ ಬಳಿದು ಕರವೇ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಹಿರೇಬಾಗೇವಾಡಿ ಟೋಲ್ ಬಳಿ ಕರವೇ ದಂಡು ಬಂದು ಮಹಾರಾಷ್ಟ್ರದ ಲಾರಿಗಳನ್ನ ಅಡ್ಡಗಟ್ಟಿ ಬೆಳಗಾವಿ ನಮ್ಮದು ನಮ್ಮದು ಎಂದು ಘೋಷಣೆ ಕೂಗಿದರು. ಈ ವೇಳೆ ಮಹಾರಾಷ್ಟ್ರದ ಐದು ಲಾರಿಗಳ ಮೇಲೆ ಕಲ್ಲು ತೂರಾಟ ನಡೆದರಿಂದ ಲಾರಿಗಳ ಮುಂಭಾಗದ ಗ್ಲಾಸ್ ನೂಚ್ಚು ನೂರು ಆದವು. ಅಷ್ಟೆ ಅಲ್ಲದೆ ಟೋಲ್ ಬಳಿ ನಿಂತಿದ್ದ ಮಹಾರಾಷ್ಟ್ರದ ಲಾರಿಗಳಿಗೆ ಕಪ್ಪು ಮಸಿ ಬಳಿಯೋ ಮೂಲಕ ಮಹಾರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ ನಂಬರ್ ಪ್ಲೇಟ್ ಕಿತ್ತು ಹಾಕಿ, ಲಾರಿಗಳ ಚಕ್ರದ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಕಾರ್ಯಕರ್ತರು ಪೆÇಲೀಸ್ ವಶಕ್ಕೆ : ಇತ್ತ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಲ್ಲು ತೂರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇರಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ಬೆಳಗಾವಿ ಪೆÇಲೀಸರು ವಶಕ್ಕೆ ತೆಗೆದುಕೊಂಡರು. ಹಿರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾ ಬಳಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೆಳಗಾವಿ ನಗರ ಪ್ರವೇಶಕ್ಕೂ ಮೊದಲೇ ಟೋಲ್ ನಾಕಾ ಬಳಿಯೇ ಕರವೇ ಕಾರ್ಯಕರ್ತರನ್ನು ಪೆÇಲೀಸರು ತಡೆದರು. ಕೂಡಲೇ ಹೋರಾಟಗಾರರನ್ನು ಎಳೆದ ಪೆÇಲೀಸರು ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಬೆಳಗಾವಿ ಪೆÇಲೀಸರು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಈ ವೇಳೆ ಪೆÇಲೀಸ್ ವಾಹನವೇರಿದ ಕರವೇ ಕಾರ್ಯಕರ್ತರು ರಕ್ತವನ್ನು ಚೆಲ್ಲುತ್ತೇವೆ ನ್ಯಾಯವನ್ನು ಕೇಳುತ್ತೇವೆ. ಸ್ನೇಹಕ್ಕೂ ಬದ್ಧ, ಸಮರಕ್ಕೂ ಸಿದ್ಧ ಹಾಗೂ ಯಾರಪ್ಪಂದ ಏನೈತಿ ಬೆಳಗಾವಿ ನಮ್ದೈತಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ರಸ್ತೆ ಮೇಲೆಯೇ ಮಲಗಿ ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೂ ಕೆಲವರು ಪೆÇಲೀಸ್ ವಾಹನವೇರಿ ಕೈಯಲ್ಲಿ ಬಾವುಟ ಹಿಡಿದು ಘೋಷಣೆ ಹಾಕುತ್ತಿದ್ದರು. ಆಗ ಕರವೇ ಕಾರ್ಯಕರ್ತೆಯರನ್ನು ಬಸ್ ಮೇಲಿಂದ ಕೆಳಗೆ ಇಳಿಸಲು ಪೆÇಲೀಸರ ಹರಸಾಹಸಪಟ್ಟರು.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿ, ಇವತ್ತು ಪೆÇಲೀಸರು ನಮ್ಮನ್ನ ಅರೆಸ್ಟ್ ಮಾಡಿದ್ದಾರೆ. ಇವತ್ತು ಒಂದಿನ ನಮ್ಮನ್ನು ತಡೆಯಬಹುದು. ಆದರೆ, ಇದು ಒಂದು ದಿನದ ಚಳುವಳಿ ಅಲ್ಲ. ಕರವೇ ಕಾರ್ಯಕರ್ತರನ್ನ ಬಂಧಿಸಿರುವುದನ್ನ ಧಿಕ್ಕರಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ ಇವತ್ತು ಪೆÇಲೀಸರನ್ನು ಮುಂದಿಟ್ಟುಕೊಂಡು ನಮ್ಮನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಸರ್ಕಾರ ನಮ್ಮ ಚಳುವಳಿ ಹತ್ತಿಕ್ಕಿದರೆ ನಾವು ನಮ್ಮ ಹೋರಾಟ ಇಷ್ಟಕ್ಕೆ ಬಿಡಲ್ಲ. ಸರ್ಕಾರಕ್ಕೆ ತಕ್ಕ ಶಾಸ್ತಿ ಮಾಡುತ್ತೇವೆ. ಜೊತೆಗೆ ಅಧಿವೇಶನದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಬಗ್ಗೆ ಕುಳಿತು ಚರ್ಚೆ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕ ಅಧ್ಯಕ್ಷ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಗಣೇಶ ರೋಕಡೆ, ರುದ್ರಗೌಡ ಪಾಟೀಲ, ಮಹೇಶ ಹಟ್ಟಿಹೊಳಿ, ರಮೇಶ ತಳವಾರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.