ಬಳ್ಳಾರಿ

ನಾಳೆ 24 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ

ನಾಳೆ 24 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ

ಬಳ್ಳಾರಿ 23: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್‌-2 ಮೇಲೆ ಇರುವ ಫೀಡರ್‌ಗಳ ಸಿ.ಟಿ ಬದಲಾಯಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಮೇ 24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು: ವಿನಾಯಕ ನಗರ,  ಕಂಟೋನ್‌ಮೆಂಟ್, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್‌, ಕೌಲ್‌ಬಜಾರ್ ಮೇನ್ ರೋಡ್, ಟೈಲರ್ ಬೀದಿ, ಕುವೆಂಪು ನಗರ, ಜಯನಗರ, ಚಂದ್ರ ಕಾಲೋನಿ, ರಾಮಾಂಜನೇಯ ನಗರ, ಸಿ.ಎಮ್‌.ಸಿ ಕಾಲೋನಿ, ಎಕ್ಸ್‌ ಸರ್ವಿಸ್‌ಮೆನ್ ಕಾಲೋನಿ, ಅರಣ್ಯ ಕ್ವಾಟರ್ಸ್‌, ಜಾಗೃತಿ ನಗರ, ಟ್ರಾಮಾಕೇರ್ ಸೆಂಟರ್, ಜಲ ಶುದ್ಧೀಕರಣ ಕೇಂದ್ರ ಇನ್ನೂ ಮುಂತಾದ ಏರಿಯಾಗಳು, ಕೊಳಗಲ್ಲು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ 

ಬಳ್ಳಾರಿ 23: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಹೊಸ ಬ್ಯಾಂಕ್‌-4 ಅಳವಡಿಸುವ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮೇ 24 ರಂದು ಬೆಳಗ್ಗೆ 10 ರಿಂದ ಸಂಜೆ 04 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್‌-39 ಅಲ್ಲಿಪುರ ನಗರ​‍್ರದೇಶ ಫೀಡರ್ ಮಾರ್ಗದ ಅಲ್ಲಪುರ ಗ್ರಾಮ, ಬೈ ಪಾಸ್ ರೋಡ್‌. ಎಫ್‌-74 ಗೌತಮ್ ನಗರ ಎನ್‌.ಜೆ.ವೈ ಫೀಡರ್ ಮಾರ್ಗದ ಡಿಸಿ ನಗರ, ಪ್ರ್ರಶಾಂತ ನಗರ, ಆಲದಹಳ್ಳಿ ಗ್ರಾಮ. ಎಫ್‌-37 ಬೆಳಗಲ್ಲು ತಾಂಡ ಕೈಗಾರಿಕೆ  ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ. 

ಸುದ್ದಿ ಓದಿ