ನಾಳೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಬಳ್ಳಾರಿ 12: ಸರ್ಕಾರದ ಆದೇಶದಂತೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಏ. 14ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 130ನೇ ಜಯಂತ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಬೆಳಿಗ್ಗೆ 9:30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಅವರು ತಿಳಿಸಿದ್ದಾರೆ.ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನಾಚಾರಣೆಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದ್ದಾರೆ.