ಮತದಾರರ ಜಾಗೃತಿ ಕುರಿತು ಪಂಜಿನ ಮೆರವಣಿಗೆ
ಬಳ್ಳಾರಿ 19: ಬಳ್ಳಾರಿ
ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಮತದಾರರಲ್ಲಿ
ಜಾಗೃತಿ ಮೂಡಿಸಲು ಪಂಜಿನ ಮೆರವಣಿಗೆಯನ್ನು ರೂಪನಗುಡಿ ಗ್ರಾಮದಲ್ಲಿ ಇತ್ತಿಚೆಗೆ ಹಮ್ಮಿಕೊಳ್ಳಲಾಯಿತು.
ತಾಪಂ ಕಾರ್ಯನಿವರ್ಾಹಕ ಅಧಿಕಾರಿ ಜಾನಕಿ ರಾಮ್ ಅವರು ಮತದಾರರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಜೊತೆಗೆ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕೆಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಸಹಾಯಕ ಆಯುಕ್ತರು ರಮೇಶ ಕೋನಪ್ಪ ರೆಡ್ಡಿ, ಹಾಗೂ ತಾಪಂ ಸಹಾಯಕ ನಿದರ್ೇಶಕರು, ಸಿಡಿಪಿಒ, ಬಳ್ಳಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಯವರು, ಗ್ರಾಮ ಲೆಕ್ಕಾಧಿಕಾರಿಗಳು, ರೂಪನಗುಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕತರ್ೆಯರು ಹಾಗೂ ಆಶಾ ಕಾರ್ಯಕತರ್ೆಯರು ಭಾಗವಹಿಸಿದ್ದರು.