ಬಾಬರ್, ಔರಂಗಜೇಬನ ಸಂಪ್ರದಾಯ ಮರೆಯಾಗಲಿದೆ : ಸಿಎಂ ಯೋಗಿ
Tradition of Babur, Aurangzeb will disappear: CM Yogi
ಲಕ್ನೋ 17:
ವರದಿಗಳ ಪ್ರಕಾರ, ಘೋಷಣೆಗಳನ್ನು ಕೂಗುವುದು ಮತ್ತು ಹಿಂದೂ ರ್ಯಾಲಿಗಳನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಾದುಹೋಗಲು ಅವಕಾಶ ನೀಡುವುದು ಕೋಮು ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂಬ ವಿರೋಧ ಪಕ್ಷದ ಸಲಹೆಯನ್ನು ಉಲ್ಲೇಖಿಸಿ ಅವರು ಈ ಟೀಕೆಗಳನ್ನು ಮಾಡಿದ್ದಾರೆ.
ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂಗಳು ಮೆರವಣಿಗೆ ಮಾಡಬಾರದು ಎಂದು ಸಂವಿಧಾನದಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ಯೋಗಿ ಪ್ರಶ್ನಿಸಿದ್ದಾರೆ. ಮಸೀದಿಯ ಮುಂಭಾಗದಿಂದ ಹಾದು ಹೋಗಲು ಹಿಂದೂಗಳ ಮೆರವಣಿಗೆಗೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ಕೇಳಿ ನಾನು ಅಚ್ಚರಿಗೊಂಡಿದ್ದೇನೆ. ಈ ರಸ್ತೆಗಳು ಯಾರಿಗೆ ಸೇರಿವೆ? ಇದು ಸಾರ್ವಜನಿಕ ರಸ್ತೆ…ನೀವು ಅವರನ್ನು ಹೇಗೆ ತಡೆಯುತ್ತೀರಿ? ಎಂದು ಸಿಎಂ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಬಹ್ರೈಚ್ ನಲ್ಲಿ ನಡೆದ ಘಟನೆಯನ್ನು ಉದಾಹರಿಸಿದ ಸಿಎಂ ಯೋಗಿ, ಸಾಂಪ್ರದಾಯಿಕ ಮೆರವಣಿಗೆಗೆ ಎಲ್ಲಾ ಸಿದ್ಧತೆ ನಡೆಸಿದ್ದರೂ, ಅದನ್ನು ತಡೆದು ನಿಲ್ಲಿಸಲಾಗಿತ್ತು. ಅಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ್ದರಿಂದ ಮೆರವಣಿಗೆಗೆ ಅವಕಾಶ ನೀಡಿಲ್ಲ ಎನ್ನುವುದಾದರೆ, ಜೈ ಶ್ರೀರಾಮ್ ಎಂಬುದು ಪ್ರಚೋದನೆಕಾರಿಯೇ? ಇದು ನಮ್ಮ ಭಕ್ತಿ ಮತ್ತು ನಂಬಿಕೆಯ ಪ್ರತೀಕವಾಗಿದೆ ಎಂದು ಪ್ರತಿಪಾದಿಸಿದರು. ಅವರು ಕೂಡಾ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾರೆ…ಒಂದು ವೇಳೆ ನಾನು ಅಲ್ಲಾಹು ಅಕ್ಬರ್ ಘೋಷಣೆ ನನಗೆ ಇಷ್ಟವಿಲ್ಲ ಎಂದು ಹೇಳಿದರೆ, ನೀವು ಅದನ್ನು ಒಪ್ಪಿಕೊಳ್ಳುವಿರಾ ಎಂದು ಸಿಎಂ ಯೋಗಿ ಪ್ರಶ್ನಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 