ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಶೀಘ್ರ ಪರಿಹಾರ

ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಶೀಘ್ರ ಪರಿಹಾರ  Traffic problem in the town to be resolved soon.

ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಶೀಘ್ರ ಪರಿಹಾರ  

ಬೀಳಗಿ 13 : ಪಟ್ಟಣದ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ವಾಹನಗಳ ದಟ್ಟಣೆಯಿಂದ ಉಂಟಾಗಿರುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.  

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಸಿಎಂಐಡಿಪಿ) ವಿವೇಚನಾಧಿಕಾರದ ಅನುದಾನದಲ್ಲಿ ?10 ಲಕ್ಷ ವೆಚ್ಚದಲ್ಲಿ ಖರೀದಿಸಲಾದ ವಾಹನವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಅವರು ಮಾತನಾಡಿದರು.  

ಪಟ್ಟಣದ ಅಭಿವೃದ್ಧಿಗೆ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಸಹಕಾರ ಅಗತ್ಯ. ಬೀಳಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ ಅವರು, ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಅಗತ್ಯವಿರುವ ವಾಹನ ಒದಗಿಸಿರುವುದರಿಂದ ತನಿಖೆ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದರು.  

ಎಸ್ಪಿ ಸಿದ್ಧಾರ್ಥ ಗೋಯಲ್ ಮಾತನಾಡಿ, ಶಾಸಕರು ಪೊಲೀಸ್ ಇಲಾಖೆಗೆ ಸಹಕಾರ ನೀಡುತ್ತಿದ್ದು, ಸಾರ್ವಜನಿಕರ ಹಿತಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನ ನೀಡಿದ್ದಾರೆ. ಇಲಾಖೆಯ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದರು.  

ಸಿಪಿಐ ಹನುಮಂತ ಸಣಮನಿ ಮಾತನಾಡಿ, ಶಾಸಕರು ಸೂಚಿಸಿದಂತೆ ಪಟ್ಟಣದ ಟ್ರಾಫಿಕ್ ಜಾಮ್, ರಸ್ತೆ ಅತಿಕ್ರಮಣ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶೀಘ್ರ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.  

ಕಾರ್ಯಕ್ರಮದಲ್ಲಿ ಆರ​‍್ಿ ಭೀಮನಗೌಡ, ಎಚ್‌.ಕೆ.ಆರ್‌. ಪಾಟೀಲ, ಪಿಎಸ್‌ಐ ಎನ್‌.ಟಿ. ದಡ್ಡಿಮನಿ, ಹನುಮಂತ ಕಾಂಕಡಕಿ, ಶ್ರೀಶೈಲ ಸೂಳಿಕೇರಿ, ಯಮನಪ್ಪ ರೊಳ್ಳಿ, ಜಿ.ಆರ್‌. ಪಾಟೀಲ, ಮಹಾದೇವ ಹಾದಿಮನಿ, ಬಸವರಾಜ ಹಳ್ಳದಮನಿ, ಸಿದ್ದು ಸಾರಾವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.