ಕ್ಲಾರ್ಟ್ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಕ್ರಮ
ಕೊಪ್ಪಳ 05: ಪರಿಸರ ಭದ್ರತೆಗಾಗಿ ಪ್ರತಿಷ್ಠಾನ (ಫೌಂಡೇಷನ್ ಫಾರ್ ಎಕೊಲಾಜಿಕಲ್ ಸೆಕ್ಯುರಿಟಿ) ಸಂಸ್ಥೆಯ ವತಿಯಿಂದ ಜಿಲ್ಲಾ ಪಂಚಾಯತ್ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್ ಬೇಸ್ಡ್ ಪ್ಲ್ಯಾನಿಂಗ್) ಆಧಾರದ ಯೋಜನೆಗಳನ್ನು ಅಳವಡಿಸಿಕೊಂಡು ಕಾಮಗಾರಿಗಳ ಗುಚ್ಚ ತಯಾರಿಸುವಲ್ಲಿ ಜಲಸಂರಕ್ಷಣಾ ಕಾಮಗಾರಿಗಳನ್ನು ಆಯ್ಕೆ ಮಾಡುವಲ್ಲಿ ಕ್ಲಾಟರ್್ ತಂತ್ರಜ್ಞಾನವನ್ನು ಬಳಕೆ ಮಾಡುವ ಕುರಿತಂತೆ ತಾಂತ್ರಿಕ ಸಂಯೋಜಕರು / ಸಹಾಯಕರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಪ್ರೋಗ್ರಾಮ್ ಮ್ಯಾನೇಜರ್ ಸುರೇಶ ಮತ್ತು ಹರೀಶ, ಸಂಪನ್ಮೂಲ ವ್ಯಕ್ತಿ ಸುನೀಲ್ ಕುಮಾರ್ ಮಾತನಾಡಿ ಪ್ರಾತ್ಯಕ್ಷಿಕೆ ಮೂಲಕ ರಿಡ್ಜ್ ಟು ವ್ಯಾಲಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಕುರಿತು ತಿಳಿಸಿದರು. ನಂತರ ತರಬೇತಿದಾರರೊಂದಿಗೆ ಗಿಣಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಡದಾಳ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ಮಾಡಿ ತಾಂತ್ರಿಕ ಅಂಶಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ ಎನ್.ಕೆ.ತೊರವಿ, ಎ.ಡಿ.ಪಿ.ಸಿ, ಡಿ.ಐ.ಇ.ಸಿ, ಡಿ.ಎಂ.ಐ.ಎಸ್ ಸೇರಿದಂತೆ ಜಿಲ್ಲೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕ ಅಭಿಯಂತರರು (ಸಿವಿಲ್, ಅರಣ್ಯ, ತೋಟಗಾರಿಕೆ ಮತ್ತು ಕೃಷಿ) ರವರು ತರಬೇತಿದಾರರಾಗಿ ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 