ಪುರಸಭೆಯಲ್ಲಿ ಪೌರ ಕಾರ್ಮಿಕರಿಗೆ ತರಬೇತಿ ಶಿಬಿರ
ಬ್ಯಾಡಗಿ 21 : ಪಟ್ಟಣದ ಪುರಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾವೇರಿ ಇವರ ವತಿಯಿಂದ ಬ್ಯಾಡಗಿ ರಾಷ್ಟ್ರೀಯ ದತ್ತು ಮಾಸಾಚರಣೆ ನವಂಬರ- 2026ರ ಅಂಗವಾಗಿ ಪೌರಕಾರ್ಮಿಕರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ದತ್ತು ಪ್ರಕ್ರಿಯೆ ಕುರಿತು ರಮೇಶ್ ನಾಯಕ್ ಆಪ್ತಸಮಾಲೋಚಕರು ಜಿಲ್ಲಾ ಮಕ್ಕಳ ಘಟಕ ಹಾವೇರಿ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಚಂದ್ರಕಾಂತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬ್ಯಾಡಗಿ, ಪುರಸಭೆಯ ಅಧಿಕಾರಿಗಳು, ಮೇಲ್ವಿಚಾರಕಿಯರ ಶಿಶು ಅಭಿವೃದ್ಧಿ ಯೋಜನೆ ಬ್ಯಾಡಗಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಜರಿದ್ದರು.