ತಾರಿಹಾಳ ಗ್ರಾಮದಲ್ಲಿ ಎಣ್ಣೆಕಾಳು ಬೆಳೆಗಳ ಕುರಿತು ರೈತರಿಗೆ ತರಬೇತಿ
Training for farmers on oilseed crops in Tarihala village
ಲೋಕದರ್ಶನ ವರದಿ
ಬೆಳಗಾವಿ 15: ತಾಲ್ಲೂಕಿನ ತಾರಿಹಾಳ ಗ್ರಾಮದ ಅಡವೆಪ್ಪಜ್ಜನ ಮಠದ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ ಮುತ್ತಿಕೊಪ್ಪ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರಿಗೆ ಎಣ್ಣೆಕಾಳು ಬೆಳೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ತಜ್ಞರು ಮಾತನಾಡಿ, ದೇಶದಲ್ಲಿ ಖಾದ್ಯ ತೈಲಗಳ ಆಮದನ್ನು ಕಡಿಮೆ ಮಾಡಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ರಾಷ್ಟ್ರೀಯ ಖಾದ್ಯ ತೈಲ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ ಎಣ್ಣೆಕಾಳು ಬೆಳೆಗಳ ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗಳ ಬೆಳೆಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರ ಮುತ್ತಿಕೊಪ್ಪದ ವಿಜ್ಞಾನಿ ಡಾ. ಜೆ.ಬಿ. ವಿಶ್ವನಾಥ ಅವರು ಸೋಯಾಬೀನ್ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಮಗ್ರ ಕೀಟ ಹಾಗೂ ಪೋಷಕಾಂಶ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ದೊರೆಯುವ ಅಡುಗೆ ಎಣ್ಣೆಗಳಲ್ಲಿ ಕಲಬೆರಕೆ ಸಾಧ್ಯತೆ ಹೆಚ್ಚಿರುವುದರಿಂದ ರೈತರು ತಾವು ಬೆಳೆದ ಎಣ್ಣೆಕಾಳುಗಳಿಂದ ಶುದ್ಧ ಎಣ್ಣೆ ಬಳಕೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಮಂಗಳಾ ಬಿರಾದಾರ ಅವರು ಕೃಷಿ ಇಲಾಖೆಯಿಂದ ರೈತರಿಗೆ ನೀಡಲಾಗುತ್ತಿರುವ ಸಹಾಯಧನ ಹಾಗೂ ಸೌಲಭ್ಯಗಳ ಕುರಿತು ವಿವರಿಸಿದರು. ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಬೆಳೆ ವಿಮೆಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಿರೇಬಾಗೇವಾಡಿ ಹೋಬಳಿ ಕೃಷಿ ಅಧಿಕಾರಿ ಪ್ರಭು ಡೋಣಿ, ಪ್ರಗತಿಪರ ರೈತರಾದ ಅಡಿವೆಪ್ಪ ಪಾಟೀಲ, ಅಣ್ಣಪ್ಪ ನಾಯ್ಕ, ಸಂಜೀವಿನಿ ಮಹಿಳಾ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ತಾರಿಹಾಳ ಗ್ರಾಮದ ರೈತರು ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 