ರೈತರಿಗೆ ಮಣ್ಣಿನ ಸಂರಕ್ಷಣೆ ಕುರಿತು ತರಬೇತಿ
Training for farmers on soil conservation
ಲೋಕದರ್ಶನ ವರದಿ
ಯರಗಟ್ಟಿ: ಕೃಷಿ ಇಲಾಖೆ ಸವದತ್ತಿ ಮತ್ತು ಕೆವಿಕೆ ಮತ್ತಿಕೊಪ್ಪ ಇವರ ಸಂಯೋಗದಲ್ಲಿ ಆತ್ಮ ಯೋಜನೆಯಡಿ ರೈತರಿಗೆ ಖೇತ ಬಚಾವೋ ಅಭಿಯಾನ ತರಬೇತಿ ಕಾರ್ಯಕ್ರಮವನ್ನು ತಾಲೂಕಿನ ಸತ್ತಿಗೇರಿ ಗ್ರಾಮದ ವಿಠ್ಠಲ ಮಂದಿರದಲ್ಲಿ ಹಾಗೂ ರೈನಾಪೂರ ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ಕೆವಿಕೆ ಮತ್ತಿಕೊಪ್ಪದ ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಎಮ್. ಎಸ್. ವಾರದ ಅವರು ಮಾತನಾಡಿ ಈ ಅಭಿಯಾನದ ಮುಖ್ಯ ಉದ್ದೇಶವೆಂದರೆ ಮಣ್ಣನ್ನು ರಕ್ಷಣೆ ಮಾಡುವುದು, ರೈತರು ಅತಿಯಾದ ರಾಸಾಯನಿಕ ಬಳಕೆಯಿಂದ ಭೂಮಿ ಹಾಳಾಗುತ್ತಿದೆ ಆದಷ್ಟು ಸಮತೋಲಿತ ರಸಗೊಬ್ಬರ ಅಥವಾ ಮಣ್ಣು ಆರೋಗ್ಯ ಚೀಟಿ ಆಧಾರಿತ ರಸಗೊಬ್ಬರ ಬಳಕೆ ಮಾಡಿ ಕೃಷಿ ಮಾಡಿದರೆ ಮಣ್ಣು ಸುರಕ್ಷಣೆ ಮಾಡಬಹುದು ಎಂದು ತಿಳಿಸಿದರು.
ಮಣ್ಣು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ರೈತರ ಆದ್ಯ ಕರ್ತವ್ಯವಾಗಿದ್ದು ಈ ಅಭಿಯಾನವು ಜೂನ್ ಒಂದನೇ ತಾರೀಖಿನಿಂದ ಈ ತಿಂಗಳ 30ನೇ ತಾರೀಖಿನವರೆಗೂ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು ಎಲ್ಲಾ ರೈತರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಾಹಿತಿ ನೀಡಿದರು.
ಜೈವಿಕ ಗೊಬ್ಬರಗಳ ಬಳಕೆ, ಹಸಿರೆಲೆ ಗೊಬ್ಬರಗಳ ಉಪಯೋಗ, ಬೆಳೆ ಪರಿವರ್ತನೆ, ಸಮತೋಲಿತ ರಸಗೊಬ್ಬರ ಬಳಕೆ, ಮಣ್ಣು ಪರೀಕ್ಷೆ, ಯೂರಿಯ ಗೊಬ್ಬರದ ದುಷ್ಪರಿಣಾಮಗಳು ,ನ್ಯಾನೋ ಗೊಬ್ಬರ ಬಳಕೆ ಮುಂತಾದ ರೈತರಿಗೆ ಅನುಕೂಲವಾಗುವ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 