ಹಾವೇರಿ

ಸರ್ಕಾರಿ ಅಧಿಕಾರಿಗಳಿಗೆ ಸುಸ್ಥಿರ ಅಭಿವೃದ್ಧಿ ಕುರಿತು ತರಬೇತಿ

ಸರ್ಕಾರಿ ಅಧಿಕಾರಿಗಳಿಗೆ ಸುಸ್ಥಿರ ಅಭಿವೃದ್ಧಿ ಕುರಿತು ತರಬೇತಿ


ಹಾವೇರಿ, ಅ. 6 :   ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ಸಿ-ವೃಂದದ ನೌಕರರಿಗಾಗಿ ಎರಡು ದಿನಗಳ ತರಬೇತಿ ಕಾರ್ಯಕ್ರಮವು ಸೋಮವಾರ ಹಾವೇರಿ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಆರಂಭಗೊಂಡಿತು.  

ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಪರಿಚಯಾತ್ಮಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಮೈಸೂರು ಕರ್ನಾಟಕ ಕೇಂದ್ರದ ಆಡಳಿತ ತರಬೇತಿ ಸಂಸ್ಥೆಯ ಡಾ. ಸಿದ್ದರಾಮಯ್ಯ ಹೆಚ್‌.ಎಂ. ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಉಪನ್ಯಾಸ ನೀಡಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಬುಜಬಲಿ ಕೆ. ಪಾಸಾನ ವಹಿಸಿದ್ದರು. ತರಬೇತಿ ಸಂಸ್ಥೆಯ ಉಪ-ಪ್ರಾಚಾರ್ಯ ಬಸವರಾಜ ಎಸ್‌. ಅಣ್ಣಿಗೇರಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.  

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ಉಪ-ಪ್ರಾಚಾರ್ಯರು, ಬೋಧಕರು, ವಿವಿಧ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ