ದೇಶದ್ರೋಹಿಗಳು ಆದಿತ್ಯ, ಅಬ್ದುಲ್ಲಾ ಯಾರೇ ಆಗಿದ್ದರೂ ಗಲ್ಲಿಗೇರಿಸಿ: ಮುತಾಲಿಕ್
ಹೊಸಪೇಟೆ, ಜ 23 : ದೇಶದ ಸುರಕ್ಷತೆಗೆ ಸವಾಲೊಡ್ಡುವವರು ಆದಿತ್ಯ ರಾವ್ ಅಥವಾ ಅಬ್ದುಲ್ಲಾ ಯಾರೇ ಆಗಿರಲಿ ಅಂತಹವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದ್ದರೆ.
ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿರೋಧಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಬಾಂಬ್ ಇಟ್ಟು ಶರಣಾಗಿರುವ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಾಗಿದ್ದರೂ ಆತನ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.
‘ಹಿಂದೂಗಳ ದೇಶವಾಗಿರುವ ಭಾರತದಲ್ಲಿ ‘ಹಿಂದೂ ಟೆರರ್’ ಎಂಬುದು ಕಾಂಗ್ರೆಸ್ ನ ಕಟ್ಟು ಕತೆ. ದೇಶದಲ್ಲಿ ಹಿಂದೂ ಟೆರರ್ ಇಲ್ಲ. ಆದರೆ, ‘ಇಸ್ಲಾಮಿಕ್ ಟೆರರ್’ ಇರುವುದಕ್ಕೆ ಅನೇಕ ದಾಖಲೆಗಳಿವೆ ಎಂದರು.
ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಾಲಿಶನತದ್ದು. ಪೊಲೀಸರು, ದೇಶದ ಸೈನಿಕರ ಮನೋಸ್ಥೈರ್ಯ ಕುಂದಿಸುವಂತಹ ಹೇಳಿಕೆಗಳನ್ನು ನೀಡುವುದುನ್ನು ನಾನು ಕಟುವಾಗಿ ಖಂಡಿಸುತ್ತೇನೆ ಎಂದರು.
‘ಹಿಂದೂಗಳನ್ನು ಕೆಣಕಿದರೆ ಸುಮ್ಮನಿರಲ್ಲ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ನೀಡಿರುವ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 