ಶಿರಗುಪ್ಪಿಯಲ್ಲಿ ಚಹಾ ಅಂಗಡಿಗೆ ನುಗ್ಗಿದ ಸಾರಿಗೆ ಬಸ್
ಲೋಕದರ್ಶನ ವರದಿ
ಕಾಗವಾಡ 14: ತಾಲೂಕಿನ ಶಿರಗುಪ್ಪಿ ಗ್ರಾಮದ ಕಾಗವಾಡ ರಸ್ತೆಯಲ್ಲಿರುವ ಚಹಾ ಅಂಗಡಿಗೆ ಕಾಗವಾಡ ಕಡೆಯಿಂದ ಚಿಕ್ಕೋಡಿ ಕಡೆ ಹೋರಟಿದ್ದ ಕರ್ನಾಟಕ ಸಾರಿಗೆ ಬಸ್ ನುಗ್ಗಿದ್ದು, ಅಂಗಡಿ ಸಂಪೂರ್ಣ ನುಜ್ಜುಗುಜ್ಜಾಗಿದೆ.ಘಟನೆಯಲ್ಲಿ ಅದೃಷ್ಟವಶಾತ ಚಹಾ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಭಾರಿ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಮತ್ತು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.