ಶಕ್ತಿ ಯೋಜನೆಯ ಬಾಕಿ ಹಣದಿಂದ ಸಾರಿಗೆ ನಿಗಮಗಳಿಗೆ ಆರ್ಥಿಕ ಸಂಕಷ್ಟ
Transport corporations face financial difficulties due to energy project arrears
ಹೂವಿನಹಡಗಲಿ, ಸೆ.5: ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗುತ್ತಿದೆಯಾದರೂ, ಯೋಜನೆಯ ಟಿಕೆಟ್ ಮೊತ್ತವನ್ನು ಸಾರಿಗೆ ನಿಗಮಗಳಿಗೆ ಸಕಾಲದಲ್ಲಿ ಮರುಪಾವತಿಸದ ಪರಿಣಾಮ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಜಿಲ್ಲಾ ಕೆಡಿಪಿ ಮಾಜಿ ಸದಸ್ಯ ಎಂ.ಬಿ. ಬಸವರಾಜ ಆರೋಪಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಕ್ತಿ ಯೋಜನೆಯಡಿ ಸಾರಿಗೆ ನಿಗಮಗಳಿಗೆ ಸರ್ಕಾರದಿಂದ ಬರಬೇಕಿರುವ ಟಿಕೆಟ್ ಮರುಪಾವತಿ ಮೊತ್ತವೇ ಸುಮಾರು ?5,651.24 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ಸಾರಿಗೆ ನೌಕರರ ಭವಿಷ್ಯ ನಿಧಿ (ಪಿಎಫ್)ಗೆ ಸುಮಾರು ?2,658.18 ಕೋಟಿ, ನಿವೃತ್ತ ನೌಕರರಿಗೆ ನೀಡಬೇಕಿರುವ ಅಂದಾಜು ?538.18 ಕೋಟಿ ಹಾಗೂ ಡೀಸೆಲ್ ಬಿಲ್ ?1,053.88 ಕೋಟಿ ಬಾಕಿ ಉಳಿದಿದೆ ಎಂದು ಅವರು ಹೇಳಿದ್ದಾರೆ.
ಈ ಎಲ್ಲ ಬಾಕಿ ಮೊತ್ತಗಳನ್ನು ಒಟ್ಟುಗೂಡಿಸಿದರೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಮೇಲೆ ಸುಮಾರು ?9,723.99 ಕೋಟಿ ಆರ್ಥಿಕ ಹೊರೆ ಇದೆ ಎಂದು ಬಸವರಾಜ ತಿಳಿಸಿದ್ದಾರೆ. ಸರ್ಕಾರವು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಮುಂದುವರಿಸುತ್ತಿರುವ ಹಿನ್ನೆಲೆಯಲ್ಲಿ, ಯೋಜನೆಯ ಟಿಕೆಟ್ ಮೊತ್ತವನ್ನು ನಿಗಮಗಳಿಗೆ ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟವನ್ನು ನಿವಾರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 