ಕೊರೊನಾ ಸೋಂಕು ಹೆಚ್ಚುತ್ತಿರುವ ರಾಷ್ಟ್ರಗಳಿಗೆ ಇರಾಕ್ ನಿಂದ ಪ್ರಯಾಣ ನಿರ್ಬಂಧ
ಬಾಗ್ದಾದ್, ಫೆ 27: ಕೊರೊನಾ ಸೋಂಕು ವ್ಯಾಪಿಸುತ್ತಿರುವ ರಾಷ್ಟ್ರಗಳಿಗೆ ಪ್ರಯಾಣಿಸದಂತೆ ಇರಾಕ್ ಪ್ರಾಧಿಕಾರ ನಿರ್ಬಂಧ ವಿಧಿಸಿದೆ. ಕೊರೊನಾ ಸೋಂಕು ವಿರುದ್ಧದ ಹೋರಾಟದಲ್ಲಿ ಸರ್ಕಾರದ ಸಮಿತಿ ಮಾಡಿರುವ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆ.ಜಪಾನ್, ದಕ್ಷಿಣ ಕೊರಿಯಾ, ಥಾಯ್ಲೆಂಡ್, ಸಿಂಗಾಪುರ, ಇಟಲಿ, ಕುವೈತ್ ಮತ್ತು ಬಹ್ರೇನ್ ಗಳಿಗೆ ಪ್ರಯಾಣ ಬೆಳೆಸದಂತೆ ಸೂಚಿಸಲಾಗಿದೆ. ಈ ನಿರ್ಬಂಧ ಅಧಿಕೃತ ಪ್ರತಿನಿಧಿಗಳು ಮತ್ತು ರಾಜತಾಂತ್ರಿಕರಿಗೆ ಅನ್ವಯವಾಗುವುದಿಲ್ಲ. ಅಲ್ಲದೇ ಫೆ 27 ರಿಂದ ಮಾರ್ಚ್ 7 ರವರೆಗೆ ಸಿನಿಮಾ, ಕೆಫೆ, ಕ್ಲಬ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವಂತೆ ನಿರ್ಬಂಧ ವಿಧಿಸಲಾಗಿದ್ದು ಸಾರ್ವಜನಿಕ ಸಮಾರಂಭಗಳನ್ನು ಏರ್ಪಡಿಸದಂತೆಯೂ ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಶಾಲಾ ಕಾಲೇಜು ತರಗತಿಗಳೂ ಇರುವುದಿಲ್ಲ ಎಂದು ಹೇಳಲಾಗಿದೆ. ಬಾಗ್ದಾದ್ ನಲ್ಲಿ ಸೋಮವಾರ ಕೊರೊನಾ ವೈರಾಣು ಸೋಂಕಿನ ಮೊದಲ ಪ್ರಕರಣ ವರದಿಯಾಗಿತ್ತು. ಇರಾನ್ ಮೂಲದ ವಿದ್ಯಾರ್ಥಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ನಂತರ ಇರಾನ್ ನಿಂದ ಪ್ರವಾ ಮುಗಿಸಿ ವಾಪಸಾದ ಒಂದೇ ಕುಟುಂಬದ ಇತರ ನಾಲ್ವರಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 