ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ
ಕುಷ್ಟಗಿ 13: ಗುರು ಪೂರ್ಣಿಮೆ ಅಂಗವಾಗಿ ಬಿಜೆಪಿ ಮಂಡಲದ ವತಿಯಿಂದ ಬುಧವಾರ ಬೆಳಿಗ್ಗೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ದೊಡ್ಡನಗೌಡ ಎಚ್ ಪಾಟೀಲ್ ಅವರ ನೇತೃತ್ವದಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ ಶಿಕ್ಷಕರಾದ ಗೋನಾಳಮಠ ಸರ್, ಜಮೀಲಾ ಬೇಗಂ, ಡಿ.ಬಿ.ಗಡಾದ, ಶ್ಯಾಮಣ್ಣ ಅವರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ಬಸವರಾಜ ಹಳ್ಳೂರ, ಕಾಡಾ ಅಧ್ಯಕ್ಷ ತಿಪ್ಪೆರುದ್ರಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಮಹೇಶ, ಮಾಜಿ ಜಿಲ್ಲಾ ಪಂಚಾಯತ ಸದಸ್ಯಮಲ್ಲಣ್ಣ ಪಲ್ಲೇದ, ಮಂಡಲದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ವಡಿಗೇರಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಮಿನುದ್ದಿನ ಮುಲ್ಲಾ, ಮುಖಂಡರಾದ ದುರಗಪ್ಪ ವಡ್ಡಿಗೇರಿ, ಶಶಿಧರ ಕವಲಿ, ನಾಗರಾಜ ಬಿಲ್ಗಾರ್, ಅಮರೇಶ ಕುಳಗಿ, ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.