ಹಲವಾರು ವರ್ಷಗಳಿಂದ ಯೋಗವನ್ನು ಕಲಿಸುತ್ತಿರುವ, ಯೋಗ ಗುರು ಡಾ. ಈಶ್ವರ ಮೆಣಸಿನಕಾಯಿ ಅವರಿಗೆ ಸನ್ಮಾನ
Tribute to Yoga Guru Dr. Ishwara Menasinakai, who has been teaching yoga for many years
ಹಲವಾರು ವರ್ಷಗಳಿಂದ ಯೋಗವನ್ನು ಕಲಿಸುತ್ತಿರುವ, ಯೋಗ ಗುರು ಡಾ. ಈಶ್ವರ ಮೆಣಸಿನಕಾಯಿ ಅವರಿಗೆ ಸನ್ಮಾನ
ಹುಬ್ಬಳ್ಳಿ 25: ವಿಶ್ವ ಯೋಗ ದಿನ ಅಂಗವಾಗಿ ಹಲವಾರು ವರ್ಷಗಳಿಂದ ಯೋಗವನ್ನು ಕಲಿಸುತ್ತಿರುವ, ಯೋಗ ಗುರು ಡಾ. ಈಶ್ವರ ಮೆಣಸಿನಕಾಯಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಗ್ರಂಥ ನೀಡಿ, ಮಾಲಾರೆ್ಣ ಮಾಡಿ ಹೃದಯ ಸ್ಪರ್ಶಿಯಾಗಿ, ಅತ್ಯಂತ ಗೌರವದಿಂದ ಸನ್ಮಾನಿಸಲಾಯಿತು. ಅಭಿನಂದನೆಗಳನ್ನು ಸಲ್ಲಿಸಿ, ಶುಭ ಕೋರಿದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ನಿವೃತ್ ಪ್ರಾಧ್ಯಾಪಕ ಪ್ರೊ ಬಸವರಾಜ ವಿ. ಹಳೆಮನಿ, ಉಪನ್ಯಾಸಕ ವೀರೇಶ ಚಂದ್ರಕಾಂತ ಬಳಿಗಾರ, ತನ್ಮಯ ಬಿರಾದಾರ, ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 