ಸಾಹಿತ್ಯ ಲೋಕ ಕ್ಷೇತ್ರದಲ್ಲಿ ವಿಶಿಷ್ಠ ಸಾಧನೆಯ ಶಿಖರ ತಲುಪಿದ ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ ಅವರಿಗೆ ಸನ್ಮಾನ
Tribute to veteran writer Raghavendra Patil, who has reached the pinnacle of distinguished achieveme
ಹುಬ್ಬಳ್ಳಿ 31: ಸಾಹಿತಿಗಳು, ಹಿರಿಯರು, ಆತ್ಮೀಯರು, ಹಿತೈಷಿಗಳು, ನಿವೃತ್ತ ಪ್ರಾಧ್ಯಾಪಕ ರಾಘವೇಂದ್ರ ಪಾಟೀಲ ಅವರ 75ನೇ ಹುಟ್ಟು ಹಬ್ಬದ ನಿಮಿತ್ತ ಆಯೋಜಿಸಿದ್ದ ರಾಘವೇಂದ್ರ ಪಾಟೀಲ್-75 ಅಭಿನಂದನೆ ಹಾಗೂ ಪಾಟೀಲರ ವೈವಾಹಿಕ ಜೀವನ ಮತ್ತು ಬರಹದ ಬದುಕಿನ ಸುವರ್ಣ ಸಂಭ್ರಮದಲ್ಲಿ ಭಾಗವಹಿಸಿದ್ದ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಕಥೆ, ಕಾದಂಬರಿಕಾರರು, ಜೀವ ಜಗತ್ತಿನ ಪ್ರಾಣಿಶಾಸ್ತ್ರ ಮತ್ತು ಸಾಹಿತ್ಯ ಲೋಕ ಎಂಬ ಎರಡೂ ಕ್ಷೇತ್ರಗಳಲ್ಲಿ ಕೃಷಿ ಮಾಡಿ ವಿಶಿಷ್ಠ ಸಾಧನೆಯ ಶಿಖರ ತಲುಪಿದ ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರೆ್ಣ ಮಾಡಿ, ಗೌರವ ಪೂರ್ವಕವಾಗಿ ಹೆಮ್ಮೆ, ಅಭಿಮಾನದಿಂದ ಸನ್ಮಾನಿಸಿದರು. ಹುತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಪರಮಾತ್ಮ ಅವರಿಗೆ ಉತ್ತಮ ಆರೋಗ್ಯ ಭಾಗ್ಯ ನೀಡಿ ಕರುಣಿಸಲಿ ಎಂದು ಶುಭಾಶಯ ಕೋರಿದರು. ಹಿರಿಯರಾದ ಮಲ್ಲಿಕಾರ್ಜುನ ಆರ್ ಹಂಜಿ, ಹಿರಿಯ ಕಥೆಗಾರರಾದ ಡಾ. ವೀಣಾ ಶಾಂತೇಶ್ವರ, ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಜಿಲ್ಲಾಧ್ಯಕ್ಷ ಡಾ ಲಿಂಗರಾಜ ಅಂಗಡಿ, ಗೌರವ ಕಾರ್ಯದರ್ಶಿ ಪ್ರೊ ಕೆ ಎಸ್ ಕೌಜಲಗಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಾಹಿತಿಗಳು, ಗಣ್ಯರಾದ ಡಾ ನರಹಳ್ಳಿ ಬಾಲಸುಬ್ರಹ್ಮಣ್ಯ, ಮಲ್ಲಿಕಾರ್ಜುನ ಹಿರೇಮಠ, ಡಾ. ಬಾಳಣ್ಣ ಶೀಗಿಹಳ್ಳಿ, ಶ್ರೀನಿವಾಸ ವಾಡಪ್ಪಿ , ಡಾ ಪ್ರಜ್ಞಾ ಮತ್ತಿಹಳ್ಳಿ , ಡಾ ಶಶಿಧರ ನರೇಂದ್ರ, ಡಾ ಅನಿಲ ಮೈತ್ರಿ, ಮುಂತಾದವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 