ಸಿಂಧಗಿ

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ...

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ...


ಸಿಂದಗಿ 02: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ರಮೇಶ ಭೂಸನೂರ ಅವರು  31088 ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ವಿವಿಧ ವೃತ್ತಗಳಲ್ಲಿ ಸೇರಿದಂತೆ ಆಲಮೇಲ, ಮೋರಟಗಿ, ಯಂಕಂಚಿ, ಗೋಲಗೇರಿ, ತಾಂಬಾ ಮುಂತಾದ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. 

ಬಿಜೆಪಿ ಜಿಲ್ಲಾ ವಿವಿಧ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ರಾಜಶೇಖರ ಪೂಜಾರಿ, ಪ್ರಕಾಶ ಅಕ್ಕಲಕೋಟ, ಬಸವರಾಜ ಬಿರಾದಾರ, ವಿವೇಕ ಡಬ್ಬಿ, ಮಲ್ಲಣ್ಣ ಮನಗೂಳಿ, ಜಿತೇಂದ್ರ ರಜಪೂತ ಸೇರಿದಂತೆ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.  

ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು 93380 ಮತಗಳನ್ನು ಪಡೆದು 31088 ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62292 ಮತಗಳು, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4321 ಮತಗಳು, ಡಾ.ಸುನೀಲಕುಮಾರ ಹೆಬ್ಬಿ ಮತಗಳು 916, ಜಿಲಾನಿ ಮುಲ್ಲಾ 505 ಮತಗಳು, ದೀಪಿಕಾ ಎಸ್‌. 409 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 1029 ನೊಟಾ ಮತಗಳು ಚಲಾವಣೆಯಾಗಿವೆ. 



ಸುದ್ದಿ ಓದಿ