ಪಂಚಮಸಾಲಿ ಪೀಠದ ಟ್ರಸ್ಟಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಂ.ಬಿ. ಬಸವರಾಜ
ಹೂವಿನಹಡಗಲಿ 15: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಆಂತರಿಕ ಕಲಹದ ಹಿನ್ನೆಲೆ ಟ್ರಸ್ಟಿಗಳು ಉಚ್ಚಾಟಿಸಿರುವುದು ಖಂಡನೀಯ. ಆರೋಪ ಮಾಡುವ ಟ್ರಸ್ಟಿಗಳು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತನಾಡಲಿ ಎಂದು ವಿಜಯನಗರ ಜಿಲ್ಲೆಯ ಪಂಚಮಸಾಲಿ ಸಮುದಾಯದ ಮುಖಂಡ ಎಂ.ಬಿ. ಬಸವರಾಜ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸಂಜೆ ನಮ್ಮ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಠದ ಟ್ರಸ್ಟಿಗಳು ಸರ್ಕಾರದಿಂದ ನೀಡಲಾದ ಅನುದಾನ ಹಾಗೂ ಭಕ್ತರು ನೀಡಿದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಂಡಿದ್ದು, ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಶ್ರೀಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ವಿಷಾದನೀಯ ಸಂಗತಿ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಎಂ.ಬಿ.ಬಸವರಾಜ ಆಗ್ರಹಿಸಿದರು.