ಪ್ರಾಥಮಿಕ ಶಾಲಾ ಮಕ್ಕಳ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ

ಪ್ರಾಥಮಿಕ ಶಾಲಾ ಮಕ್ಕಳ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ  Two-day sports meet for primary school children inaugurated

ಲೋಕದರ್ಶನ ವರದಿ 

ಕಂಪ್ಲಿ 31 :  ಪಟ್ಟಣದ ಶಾಮಿಯಾಚಂದ್ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬಳ್ಳಾರಿ ಶಿಕ್ಷಣ ಇಲಾಖೆ, ಕುರುಗೋಡು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಯೋಗದಲ್ಲಿ ಕಂಪ್ಲಿ ವಲಯ-1ರ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಎರಡು ದಿನಗಳ ಕ್ರೀಡಾಕೂಟಕ್ಕೆ ಸೋಮವಾರ ಚಾಲನೆ ನೀಡಲಾಯಿತು.  

ಶಾಮಿಯಾಚಂದ್ ಶಾಲಾ ಆವರಣದಲ್ಲಿ ನಡೆದ ಕ್ರೀಡಾಕೂಟಕ್ಕೆ ಎನ್ಪಿಎಸ್ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ., ಇಸಿಒ ರೇವಣ್ಣ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.  

ಕ್ರೀಡಾಕೂಟದ ಕಾರ್ಯದರ್ಶಿ ರಮೇಶ್ ಶಿವಪುರ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡಾಕೂಟದಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಮುಂದಿನ ಹಂತಕ್ಕೆ ಆಯ್ಕೆಯಾಗಬೇಕು. ತಾಲೂಕಿನ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಹೇಳಿದರು.  

ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ಕ್ರೀಡೆಗೆ ಕೊನೆಯಿಲ್ಲ ಎಂದು ಅವರು ಹೇಳಿದರು.  

ಎಸ್‌ಎನ್ಪೇಟೆ 8ನೇ ವಾರ್ಡ್‌ ಕ್ಲಸ್ಟರ್ನ ಶಾಲಾ ಮಕ್ಕಳು ಕಬಡ್ಡಿ, ಖೋ-ಖೋ, ಥ್ರೋಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌. ಜಡೆಪ್ಪ, ಅಂಗವಿಕಲರ ಸಂಘದ ಅಧ್ಯಕ್ಷ ಜೋಗಿ ರುದ್ರ​‍್ಪನಾಯಕ, ಕ್ರೀಡಾಕೂಟದ ಅಧ್ಯಕ್ಷ ವೆಂಕಟರಮಣ, ಸಿಆರ​‍್ಿಗಳಾದ ರೇಣುಕಾಧ್ಯ, ಗಂಗಾಧರ, ಕರುಣಾಕರ, ಪ್ರಭಾಕರ ಸೇರಿದಂತೆ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.