ರಾಷ್ಟ್ರೀಯ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ- ಇಬ್ಬರು ಸಾವು

ರಾಸಾಯನಿಕ  ಕಾರ್ಖಾನೆಯಲ್ಲಿ  ಸ್ಫೋಟ-   ಇಬ್ಬರು ಸಾವು

ಮುಂಬೈ, ನವೆಂಬರ್  5 : ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ  ಸಂಭವಿಸಿದ ಸ್ಫೋಟ ದುರಂತದಲ್ಲಿ   ಇಬ್ಬರು ಮೃತಪಟ್ಟಿದ್ದಾರೆ. 

ಈ ಘಟನೆಯಲ್ಲಿ ಇತರೆ 6 ಜನರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಜರುಗಿದೆ.  ರಾಯ್ ಗಾಡ್ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ಸ್ಪೋಟ ಸಂಭವಿಸಿದ್ದು ನಂತರ  ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದಾರೆ. ಇತರ ಆರು ಮಂದಿಗೆ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.  

ಸುದ್ದಿ ಓದಿ