ಗೋಲ್ಡನ್ ಸ್ಟಾರ್ ಸಿನಿ ಪಯಣಕ್ಕೆ ಎರಡು ದಶಕ
Two decades into Golden Star's cine journey
ನಟನಾಗಿ ಕನ್ನಡಿಗರ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ 'ಚೆಲ್ಲಾಟ' ಬಿಡುಗಡೆಯಾಗಿ ಏಪ್ರಿಲ್ 21ಕ್ಕೆ ಇಪ್ಪತ್ತು ವರ್ಷಗಳಾಗಿವೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸಿದ್ದರು.
ಈ ಮೂಲಕ ಗಣೇಶ್ ಅವರು ನಾಯಕರಾಗಿ ಚಿತ್ರರಂಗ ಪ್ರವೇಶಿಸಿ ಇಪ್ಪತ್ತು ವರ್ಷಗಳಾಗಿದೆ. ಅದೇ ವರ್ಷ ಗಣೇಶ್ ಅಭಿನಯದ ಕನ್ನಡದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ 'ಮುಂಗಾರು ಮಳೆ' ಸಹ ಬಿಡುಗಡೆಯಾಗಿ, ಭರ್ಜರಿ ಯಶಸ್ಸು ಕಂಡಿತ್ತು. ಆನಂತರ 'ಗಾಳಿಪಟ', 'ಚೆಲುವಿನ ಚಿತ್ತಾರ', 'ಕೃಷ್ಣ'ದಿಂದ ಹಿಡಿದು ಇತ್ತೀಚೆಗೆ ತೆರೆಕಂಡ 'ಕೃಷ್ಣಂ ಪ್ರಣಯ ಸಖಿ'ವರೆಗೂ ಸಾಕಷ್ಟು ಹಿಟ್ ಚಿತ್ರಗಳ ಮೂಲಕ ಅಭಿಮಾನಿಗಳನ್ನು ಗಣೇಶ್ ತಮ್ಮ ಅಮೋಘ ಅಭಿನಯದಿಂದ ರಂಜಿಸಿದ್ದಾರೆ. ಗಣೇಶ್ ನಾಯಕರಾಗಿ ಇಪ್ಪತ್ತು ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮೆಚ್ಚಿನ ನಾಯಕನಿಗೆ ವಿಶೇಷ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 