ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು
ಹೂವಿನಹಡಗಲಿ ಜ.14: ರಾತ್ರಿ ಕಬ್ಬು ಸಾಗಣೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮುದ್ಲಾಪುರ ತಾಂಡಾ ಬಳಿ ಗುರುವಾರ ಸಂಭವಿಸಿದೆ.
ರಸ್ತೆ ಅಪಘಾತದಲ್ಲಿ ಹಕ್ಕಂಡಿ ಗ್ರಾಮದ ಬಸವರಾಜ(41), ಕುಮಾರೇಶ(35) ಮೃತಪಟ್ಟವರು, ನಿಯಂತ್ರಣ ತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ಕಬ್ಬು ಸಾಗಣೆ ಟ್ರ್ಯಾಕ್ಟರ್ ಹರಿದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.