ಸೇನಾ ದಾಳಿಗೆ ಕಾಶ್ಮೀರದಲ್ಲಿ ಇಬ್ಬರು ಉಗ್ರರ ಬಲಿ
ಶ್ರೀನಗರ, ಡಿಸೆಂಬರ್ 26: ಶೋಪಿಯಾನ್ ಜಿಲ್ಲೆಯ ಕನಿಗಂ ಪ್ರದೇಶದಲ್ಲಿ ನಡೆದ ಎನ್ ಕೌಂಟರ್
ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಭಾರತೀಯ ಸೇನೆ ಕೊಂದು ಹಾಕಿದೆ ಎಂದು ಕಾಶ್ಮೀರ
ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ
ಕಾಶ್ಮೀರದ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ
ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಗಳು
ತಿಳಿಸಿದ್ದಾರೆ.
ಪಡೆಗಳು ಶೋಧ ನಡೆಸುತ್ತಿರುವಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಭದ್ರತಾಪಡೆ ಪ್ರತಿದಾಳಿ ನಡೆಸಿದಾಗ ಇಬ್ಬರು ಉಗ್ರರು ಗುಂಡಿಗೆ ಬಲಿಯಾಗಿದ್ದಾರೆ. ಇನ್ನೂ ಉಗ್ರರ ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದೂ ಭದ್ರತಾಪಡೆ ಮೂಲಗಳು ಹೇಳಿವೆ.