ಅಂತರರಾಷ್ಟ್ರೀಯ

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಕಾಟ..

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಕಾಟ..

  ಬೆಂಗಳೂರು , ನ 15   ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ  ಕರಾವಳಿ ಮತ್ತು ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇನ್ನು ಮೂರು ದಿನ  ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
 
 ಬೆಂಗಳೂರು ನಗರದಲ್ಲಿ ಇಂದು ಮತ್ತು ನಾಳೆ ಎರಡು ದಿನ ಎರಡು ಭಾರೀ ಮಳೆ ಆಗುವ ಸಾಧ್ಯತೆಯಿದೆ  ಇಲಾಖೆ ವರದಿ ಹೇಳಿದೆ.
 
ರಾಮನಗರ  ಹಾಸನ, ಚಿಕ್ಕಮಗಳೂರು . ಚಿಕ್ಕಬಳ್ಳಾಪುರ, ತುಮಕೂರು  ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ , ಶಿವಮೊಗ್ಗ  ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗಾಳಿ  , ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಮಂಗಳವಾರದವರೆಗೆ ಯೆಲ್ಲೋ ಅಲರ್ಟ್‌’ಘೋಷಿಸಲಾಗಿದೆ ಎಂದು ವರದಿ ಹೇಳಿದೆ.

ಸುದ್ದಿ ಓದಿ