ರಾಷ್ಟ್ರೀಯ

ಗಾಂಜಾ ಮಾರಾಟ ಯತ್ನ: ಇಬ್ಬರ ಬಂಧನ

ಗಾಂಜಾ ಮಾರಾಟ ಯತ್ನ: ಇಬ್ಬರ ಬಂಧನ

ಬೆಂಗಳೂರು, ಸೆಪ್ಟೆಂಬರ್ 30: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿ, 2,200 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸರ್ಬೇಶ್ವರ್ ಬೇಹರ (27), ಬಿಸ್ವರಂಜನ್ ಮಹಾಲಿಕ್ (35) ಬಂಧಿತ ಆರೋಪಿಗಳು.

ಬಂಧಿತರಿಂದ 24,000 ರೂ ಮೌಲ್ಯದ 2,200  ಗ್ರಾಂ ತೂಕ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರದ ಕೆಂಗುಂಟೆಯ ಅಂಬೇಡ್ಕರ್ ಕಾಲೇಜ್ ಎದುರಿನ ಆಟದ ಮೈದಾನದ ಬಳಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್ ಡಿಪಿ ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ವಿ ಟಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಸುದ್ದಿ ಓದಿ