ಕುಷ್ಟಗಿ

ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಒಬ್ಬ ಸಾವು

ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಒಬ್ಬ ಸಾವು

ಕುಷ್ಟಗಿ 08; ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ತಾಲೂಕಿನ ಕುಂಬಳಾವತಿ ಗ್ರಾಮದ ಬಳಿಯ ರಸ್ತೆಯಲ್ಲಿ ನಡೆದಿದೆ.  

ಮೃತಪಟ್ಟ ವ್ಯಕ್ತಿಯನ್ನು ಬೆನಕನಾಳ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದಪ್ಪ ತಂದೆ ಭೀಮನಗೌಡ ಮಾಲೀಪಾಟೀಲ್ (48) ಎಂದು ಗುರುತಿಸಲಾಗಿದೆ.  

ಘಟನೆ ವಿವಿರ; ಬಿಲ್ ಕಲೆಕ್ಟರ್ ಆನಂದಪ್ಪ ಎಂದಿನಂತೆ ಬೆನಕನಾಳ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ಮುಕ್ತಾಯಗೊಳಿಸಿ ಬೆನಕನಾಳ ಗ್ರಾಮದಿಂದ ಸ್ವಗ್ರಾಮ ಕುಂಬಳಾವತಿ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಗ್ರಾಮದ ಸಮೀಪ ಎದುರಿನಿಂದ ಬಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಸಿಪಿಐ ನಿಂಗಪ್ಪ ರುದ್ರ​‍್ಪಗೋಳ ತಿಳಿಸಿದ್ದಾರೆ.  

ಈ ಘಟನೆ ಕುರಿತು ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ಪ ಸುಬೇದಾರ, ನೇರಗಾ ಸಹಾಯಕ ನಿರ್ದೇಶಕ ನಿಂಗನಗೌಡ, ಪಂ.ರಾ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್ ಪಾಟೀಲ್ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹಾಗೂ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ. 


ಸುದ್ದಿ ಓದಿ