ಯು.ಟಿ.ಖಾದರ್ ಗೆ ಜೀವ ಬೆದರಿಕೆ
ಬೆಂಗಳೂರು,ಮಾ.6, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ. ಖಾದರ್ ಅವರ ಜೀವಕ್ಕೆ ಅಪಾಯವಿರುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.ವಿಧಾನಸೌಧದಲ್ಲಿಂದು ಈ ಬಗ್ಗೆ ತಿಳಿಸಿದ ಯು.ಟಿ.ಖಾದರ್, ಮೂರ್ನಾಲ್ಕು ತಿಂಗಳ ಹಿಂದೆ ಗೃಹ ಸಚಿವರು ತಮಗೆ ಮೊಬೈಲ್ ಕರೆ ಮಾಡಿ, ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ನಿಮ್ಮ ಜೀವಕ್ಕೆ ಅಪಾಯವಿದೆ ಎಂಬ ಮಾಹಿತಿ ನೀಡಿದ್ದರು. ಅದಕ್ಕಾಗಿ ತಾವು ಗೃಹ ಸಚಿವರಿಗೆ ಧನ್ಯವಾದ ತಿಳಿಸಿದ್ದೇನೆ. ನಾನು ಜನಪ್ರತಿನಿಧಿ. ಆದರೆ ಜನಸಾಮಾನ್ಯರಿಗೆ ಈ ರೀತಿ ಆದರೆ ಯಾರು ಜವಾಬ್ದಾರಿ. ಭದ್ರತೆ ಕೇವಲ ಹೆಸರಿಗೆ ಮಾತ್ರ ಆಗಬಾರದು.
ಕೂಲಿಕಾರ್ಮಿಕನ ಜೀವಕ್ಕೂ ಬೆಲೆ ಇದೆ. ನಿರ್ಬಯವಾಗಿ ಎಲ್ಲರೂ ಜೀವಿಸುಂತಾಗಬೇಕು. ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಕೇವಲ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ. ಯಾರು ಹಣ ನೀಡಿದ್ದರು ಎಂಬುದನ್ನು ಮೊದಲು ಪೊಲೀಸ್ ಇಲಾಖೆ ಪತ್ತೆ ಹಚ್ಚಬೇಕು. ಜನಸಾಮಾನ್ಯರಿಗೂ ಪೊಲೀಸ್ ಇಲಾಖೆ ಭದ್ರತೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಎಂದು ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 