40 ವರ್ಷಗಳ ಹೋರಾಟ, ಸಾಮಾಜಿಕ ಸೇವೆ ಗುರುತಿಸಿ ಉಡಚಪ್ಪ ಮಾಳಗಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ
Udachappa Malagi appointed State President in recognition of his 40 years of struggle and social ser
ಹಾವೇರಿ 15: ಕಳೆದ 40 ವರ್ಷಗಳಿಂದ ನಿರಂತರ ಹೋರಾಟ, ಸಾಮಾಜಿಕ ಸೇವೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಹೋರಾಟ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಉಡಚಪ್ಪ ಮಾಳಗಿ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ನ್ಯಾಯಕ್ಕಾಗಿ ಅಹಿಂದ ಜನ ಜಾಗೃತಿ ಸಂಕಲ್ಪ ವೇದಿಕೆಯ ವತಿಯಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಉಡಚಪ್ಪ ಮಾಳಗಿ ಅವರು, ರಾಜಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ರಾಜ್ಯ ಕಾರ್ಯಾಧ್ಯಕ್ಷ ಗುರುನಗೌಡ ಪಾಟೀಲ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಡಚಪ್ಪ ಮಾಳಗಿ ಅವರು, ತಮ್ಮನ್ನು ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ರಾಜ್ಯದ ಜನತೆಯ ಸಹಕಾರದೊಂದಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಜನಪರ ಹಾಗೂ ಸಾಮಾಜಿಕ ನ್ಯಾಯದ ಕೆಲಸಗಳನ್ನು ಮಾಡುವುದಾಗಿ ಹೇಳಿದರು.
ಸಂವಿಧಾನಾತ್ಮಕವಾಗಿ ಜನರ ಹಕ್ಕುಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ನಿರಂತರವಾಗಿರಬೇಕು. ಎಲ್ಲ ವರ್ಗದ ಜನರನ್ನು ಬದುಕಿನ ಮುಖ್ಯವಾಹಿನಿಗೆ ತರಲು ಸರ್ಕಾರಗಳ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು” ಎಂಬ ಧ್ಯೇಯದೊಂದಿಗೆ ಅಹಿಂದ ಸಂಘಟನೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೋರಾಟ ಸಮಿತಿಯ ಜವಾಬ್ದಾರಿ ಬಹುಮುಖ್ಯವಾಗಿದ್ದು, ಈ ಹೊಣೆಗಾರಿಕೆಯನ್ನು ನನಗೆ ವಹಿಸಿರುವುದು ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದು ಮಾಳಗಿ ಹೇಳಿದರು.
ಅಹಿಂದ ಸಂಘಟನೆಯ ರಾಜ್ಯ ಪದಾಧಿಕಾರಿಗಳು ಹಾಗೂ ರಾಜ್ಯದ ಜನತೆಯ ಸಹಕಾರದೊಂದಿಗೆ ಸಂಘಟನೆ ಮತ್ತು ಹೋರಾಟವನ್ನು ಮತ್ತಷ್ಟು ಬಲಪಡಿಸಲಾಗುವುದು. ಜನರ ಧ್ವನಿಯಾಗಿ ಕೆಲಸ ಮಾಡುವ ಮೂಲಕ ಜನಪರ ಹೋರಾಟಗಳಿಗೆ ಮುನ್ನಡೆ ನೀಡಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಹಿಂದ ಚಿಂತಕರಾದ ಸಮೃದ್ಧಿ ಸೂರಜ್ ಹೆಗಡೆ, ಲೋಹಿತ್ ನಾಯಕ್, ಕನ್ನಡ ಚಿತ್ರರಂಗದ ನಿರ್ಮಾಪಕ ಡಾ. ಮದನ್ ಪಟೇಲ್, ಮುಖಂಡರಾದ ಗಣೇಶ್ ಪೂಜಾರ್, ಜಿಲ್ಲಾಧ್ಯಕ್ಷ ಪರಮೇಶಪ್ಪ ಯತ್ನಳ್ಳಿ, ಮಾಲತೇಶ್ ಹಟ್ಟಿ, ಬಸವರಾಜ ಕಾಳೆ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 